ಚಳ್ಳಕೆರೆ: ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳು ಸಮಸಮಾಜ ನಿರ್ಮಾಣಕ್ಕೆ ದಾರಿಯಾಗಿವೆ ಎಂದು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಯೋಧ ಯೋಗೇಶ್ ಡಿ.ಎಂ ಹೇಳಿದರು.
ತಾಲೂಕಿನ ಚಟ್ಟೇಕಂಬ ಗ್ರಾಮದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಅಂಬೇಡ್ಕರ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಮಫಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,










ಅಂಬೇಡ್ಕರ್ ಅವರು ಬಾಲ್ಯದಲ್ಲಿಯೇ ಜಾತಿ ವ್ಯವಸ್ಥೆಯ ನೋವನ್ನು ಅನುಭವಿಸಿ ಅದನ್ನು ಮೆಟ್ಟಿ ನಿಂತು ಉನ್ನತ ಶಿಕ್ಷಣ ಪಡೆದದ್ದು ಸ್ಪೂರ್ತಿದಾಯಕವಾಗಿದೆ. ಅವರು ತಮ್ಮ ಅನುಭವದ ಆಧಾರದಲ್ಲಿ ಎಲ್ಲರೂ ಸಮಾನತೆಯಿಂದ ಬದುಕಬೇಕೆಂಬ ದೃಢ ಸಂಕಲ್ಪದೊಂದಿಗೆ ಭಾರತೀಯ ಸಂವಿಧಾನ ರಚನೆಯಲ್ಲಿ ಮಹತ್ವದ ಸುಧಾರಣೆಗಳನ್ನು ತಂದರು. ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯಕ್ಕೆ ಬಲ ನೀಡುವ ಅಂಶಗಳನ್ನು ಸಂವಿಧಾನದಲ್ಲಿ ಸೇರಿಸಿದ್ದು, ಇವೇ ಸಮಸಮಾಜ ನಿರ್ಮಾಣಕ್ಕೆ ದಾರಿಯಾಗಿದೆ.ಇನ್ನೂ ಅಂಬೇಡ್ಕರ್ ಅವರು ಅಸ್ಪೃಶ್ಯತೆ ವಿರುದ್ಧ ಹೋರಾಡಿ, ಶೋಷಿತರು, ತುಳಿತಕ್ಕೊಳಗಾದವರು ಹಾಗೂ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದಾರೆ. ಸಮಾಜದಲ್ಲಿ ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಕನಸು ಕಂಡ ಅವರು ನೀಡಿದ ಮಾರ್ಗದರ್ಶನದಲ್ಲಿ ನಾವು ನಡೆದುಕೊಳ್ಳಬೇಕು ಎಂದು ಹೇಳಿದರು.ಅಂಜಿನಪ್ಪ ಮಾತನಾಡಿ ಡಾ. ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ತಳ ಹದಿಯ ಮೇಲೆ ಸಂವಿಧಾನಾತ್ಮಕ ಹಕ್ಕುಗಳನ್ನು ಜಾತಿ, ಧರ್ಮ, ಲಿಂಗಬೇಧವಿಲ್ಲದೇ ಎಲ್ಲರಿಗೂ ದೊರಕಿಸಿಕೊಟ್ಟಿದ್ದಕ್ಕಾಗಿ ಭಾರತದ ಪ್ರತಿಯೊಬ್ಬ ಪ್ರಜೆಯೂ ಅವರಿಗೆ ಋಣಿಯಾಗಿರಬೇಕು ಎಂದರು.ಈ ಸಂದರ್ಭದಲ್ಲಿ ಅಂಜಿನಪ್ಪ,ಹನುಮಂತರಾಯ, ಪ್ರಕಾಶ್, ಸುನಿಲ್ ಕುಮಾರ್, ಪುನೀತ್, ನವೀನ್. ಡಿ, ಪುನೀತ್, ಪ್ರಸಾದ್, ಹನುಮ್ಮಕ್ಕ, ಒಬ್ಬಕ್ಕ, ಕವಿತಾ, ಗಂಗಮ್ಮ, ಕಾವೇರಿ, ಸೇರಿದಂತೆ ಸಮಸ್ತ ಗ್ರಾಮಸ್ಥರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.