January 30, 2026
FB_IMG_1735046408407.jpg


ಚಿತ್ರದುರ್ಗಮೇ.14:
ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 110 ರ ಅನ್ವಯ “ಎ” ರಿಜಿಸ್ಟರ್‍ನಲ್ಲಿ ಅಂದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯಲಾದ ಬಡಾವಣೆಯಲ್ಲಿನ ಸ್ವತ್ತುಗಳಿಗೆ ಇ-ಖಾತಾ ನೀಡಲಾಗುತ್ತದೆ.
ಆದರೆ, ಭೂ ಪರಿವರ್ತನೆ ಆಗದೇ ಉಪ-ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿದ್ದು, ಆದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ/ಕಟ್ಟಡಗಳಿಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ. ಈ ಅವಕಾಶವನ್ನು ಒಮ್ಮೆ ಮಾತ್ರ ನೀಡಲಾಗುತ್ತಿದೆ.
“ಬಿ” ರಿಜಿಸ್ಟರ್‍ನಲ್ಲಿ ದಾಖಲಿಸುವ ಆಸ್ತಿಗಳಿಗೆ 2024-25ನೇ ಸಾಲಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ. ತದನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುತ್ತದೆ. “ಬಿ” ರಿಜಿಸ್ಟರ್‍ನಲ್ಲಿ ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು/ ಸರ್ಕಾರದ ನಿಗಮ ಮಂಡಳಿಗಳ ಜಾಗಗಳು/ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಜಾಗಗಳು ಹೊರತುಪಡಿಸಿ ದಿನಾಂಕ:10.09.2024 ರ ಪೂರ್ವಕ್ಕೆ ನೋಂದಾಯಿತವಾದ ಭೂ ಪರಿವರ್ತನೆ ಆಗದೇ ಉಪ ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ/ಕಟ್ಟಡಗಳಿಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ.
ಆದುದರಿಂದ ಇದುವರೆಗೆ ಇ-ಖಾತಾ ಪಡೆಯದ ಅಂತಹ ಎಲ್ಲಾ ಸ್ವತ್ತುಗಳ ಮಾಲೀಕರು ಕೂಡಲೇ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಪರ್ಕಿಸಿ “ಬಿ” ರಿಜಿಸ್ಟರ್‍ನಲ್ಲಿ ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಿ ಸರ್ಕಾರ ನೀಡಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು.

“ಬಿ” ಖಾತಾ ಪಡೆಯಲು ಈ ಹಿಂದೆ ನೀಡಿದ್ದ ಅಂತಿಮ ದಿನಾಂಕ:10.05.2025ನ್ನು ವಿಸ್ತರಿಸಿದ್ದು, ಸಾರ್ವಜನಿಕರು ಈ ಅವಕಾಶವನ್ನು ಉಪಯೋಗಿಸಿಕೊಂಡು ಶೀಘ್ರವಾಗಿ ಇ-ಖಾತಾ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading