ಚಿತ್ರದುರ್ಗಮೇ.14:
ಆರೋಗ್ಯಕರ ಜೀವನ ಉತ್ತಮ ದೃಷ್ಟಿಗೆ ದಾರಿ ಎಂದು ಜಿಲ್ಲಾಸ್ಪತ್ರೆಯ ನೇತ್ರ ತಜ್ಞರಾದ ಡಾ.ಬಿ.ಜಿ.ಪ್ರದೀಪ್ ಅಭಿಪ್ರಾಯಪಟ್ಟರು.
ನಗರದ ಕರ್ನಾಟಕ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟದಲ್ಲಿ ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ಕೆಓಎಫ್ ನಿಗಮದ ಎಲ್ಲಾ ವಿಭಾಗದ ನೌಕರರಿಗೆ ಉಚಿತ ನೇತ್ರ ತಪಾಸಣೆ ಹಾಗೂ ರಕ್ತದೊತ್ತಡ, ಮಧುಮೇಹ ಪರೀಕ್ಷೆ ನಡೆಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಉತ್ತಮವಾದ ಆಹಾರ ಕ್ರಮಗಳನ್ನು ಅನುಸರಿಸುವುದನ್ನು ಜನ ಮರೆತಿದ್ದಾರೆ. ಉತ್ತಮ ಚಟುವಟಿಕೆಯುಳ್ಳ ಜೀವನ ಶೈಲಿ ರೂಢಿಸಿಕೊಂಡಿರುವುದಿಲ್ಲ. ಇವೆಲ್ಲವುಗಳ ವ್ಯತ್ಯಾಸದಿಂದ ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಗಳು ಹೆಚ್ಚಾಗುತ್ತಿವೆ. ಇಂತಹ ಖಾಯಿಲೆಗಳಿಂದ ಅಕ್ಷಿಪಟಲದ ತೊಂದರೆಯಿಂದ ದೃಷ್ಟಿದೋಷಗಳು, ಅಂಧತ್ವ ಹೆಚ್ಚಾಗುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಸಾಮಾನ್ಯವಾಗಿ ಹಿಂದೆ ಕನ್ನಡಕ ಬರುತ್ತಿದ್ದು 40 ವರ್ಷ ವಯಸ್ಸಿನ ನಂತರ ಇರುತ್ತಿತ್ತು. ಹಾಗಾಗಿ ಅದನ್ನು ಚಾಳೀಸು ಎಂಬುದು ಅಭ್ಯಾಸ. ಆದರೆ ಈಗ ಯಾವ ವಯಸ್ಸಿಗಾದರೂ ಬರಬಹುದು. ಉತ್ತಮ ಪೆÇೀಷಕಾಂಶವುಳ್ಳ ತರಕಾರಿಗಳನ್ನು, ವಿಟಮಿನ್-ಎ ಅಂಶ ಇರುವ ಹಣ್ಣು, ತರಕಾರಿ ಸೇವಿಸಿ ಉತ್ತಮ ದೃಷ್ಟಿ ಹೊಂದಬಹುದಾಗಿದೆ ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಶ್ರೀನಿವಾಸಮೂರ್ತಿ ಮಾತನಾಡಿ, ಸಾಮಾನ್ಯವಾಗಿ ಜನರು ವಿವಿಧ ರೀತಿಯ ಅಡುಗೆಗಳನ್ನ ಮಾಡುವುದನ್ನೆ ಮರೆತುಬಿಟ್ಟಿದ್ದಾರೆ. ಬೇಳೆ ಸಾರು, ಅನ್ನ ಮಾಡುವುದು ಸರ್ವೆ ಸಾಮಾನ್ಯವಾಗಿದ್ದು, ಬಹುಬೇಗ ಮಧುಮೇಹ ಬರುವ ಲಕ್ಷಣಗಳು ಹೆಚ್ಚಾಗಿವೆ. ಎಲ್ಲಾ ರೀತಿಯ ಧಾನ್ಯಗಳನ್ನು, ಸಿರಿಧಾನ್ಯಗಳನ್ನು, ದ್ವಿದಳ ಧಾನ್ಯಗಳನ್ನು ಮೊಳಕೆ ಕಾಳುಗಳಿಂದ ತಯಾರಿಸುವ ಆಹಾರ ಪದಾರ್ಥಗಳನ್ನು ಬಳಸುವುದು ಅಭ್ಯಾಸ ಮಾಡಿಕೊಳ್ಳಬೇಕು. ದಿನವೂ ಅರ್ಧ ಗಂಟೆ ಉತ್ತಮ ದೈಹಿಕ ಚಟುವಟಿಕೆಗಳಾದ ಯೋಗ, ಧ್ಯಾನ, ವ್ಯಾಯಾಮ, ವಾಕಿಂಗ್ ಮಾಡುವುದರೊಂದಿಗೆ ಉತ್ತಮ ಆರೋಗ್ಯ ಹೊಂದಬಹುದಾಗಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಓಎಫ್ ವ್ಯವಸ್ಥಾಪಕ ನಿರ್ದೇಶಕ ಡಾ ಜೈಕೃಷ್ಣ, ಜಿಲ್ಲಾ ಆಸ್ಪತ್ರೆಯ ನೇತ್ರಧಿಕಾರಿಗಳಾದ ಕೆ.ಸಿ.ರಾಮು, ಡಾ.ಐಶ್ವರ್ಯ, ಐಸಿಟಿಸಿ ವಿಭಾಗದ ನಾಗರಾಜ್, ಲೋಕೇಶ್, ಶುಶ್ರೂಷಾಧಿಕಾರಿ ಸ್ವಾತಿ, ಜಿಲ್ಲಾಸ್ಪತ್ರೆಯ ನೇತ್ರ ವಿಭಾಗದ ನೇಹಾ, ಗೀತಾ, ಅನಿಲ್ ಇದ್ದರು



About The Author
Discover more from JANADHWANI NEWS
Subscribe to get the latest posts sent to your email.