July 14, 2026
FB_IMG_1784038098430


ಚಿತ್ರದುರ್ಗ ಜುಲೈ14:
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗಣತಿ ನಮೂನೆಗಳ ಗಣಕೀಕರಣ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಸಾಧನೆ ಮಾಡಿದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಲ್ಕುಂಟೆ ಮತಗಟ್ಟೆಯ ಬಿಎಲ್‍ಒ ಕೆ.ಹೆಚ್. ಇಮಾಮ್ ಹುಸೇನ್ ಸಾಹೇಬ್ ಅವರನ್ನು ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಸನ್ಮಾನಿಸಲಾಯಿತು.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 01ರ ಕಲ್ಕುಂಟೆ ಬಿಎಲ್‍ಓ ಆಗಿ ಕಾರ್ಯನಿರ್ವಹಿಸುತ್ತಿರುವ ಕೆ.ಹೆಚ್.ಇಮಾಮ್ ಹುಸೇನ್ ಸಾಹೇಬ್ ಅವರು ಗಣತಿ ನಮೂನೆಗಳ ಗಣಕೀಕರಣ ಕಾರ್ಯದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ್ದಾರೆ. ಅವರ ಈ ಅಪೂರ್ವ ಕರ್ತವ್ಯ ನಿμÉ್ಠ ಗುರುತಿಸಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಅವರು ಬಿಎಲ್‍ಓ ಇಮಾಮ್ ಹುಸೇನ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಜವಾಬ್ದಾರಿಯುತವಾದ ಕೆಲಸವಾಗಿದೆ. ಇಮಾಮ್ ಹುಸೇನ್ ಅವರು ನಿಗದಿತ ಅವಧಿಯೊಳಗೆ ಶೇ.100ರಷ್ಟು ಗಣಕೀಕರಣ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಮಾದರಿಯಾಗಿದ್ದಾರೆ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಮತದಾರರ ನೊಂದಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ನಗರಸಭೆ ಪೌರಾಯುಕ್ತೆ ಲಕ್ಷ್ಮೀ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಗಿರೀಶ್, ಬಿಆರ್‍ಸಿ ಸಂಪತ್ ಕುಮಾರ್ ಸೇರಿದಂತೆ ಮತ್ತಿತರರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading