January 30, 2026
karnataka-lokayukta.webp


ಚಿತ್ರದುರ್ಗಜ.15:
ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಇದೇ ಜ.21 ರಿಂದ 24 ರವರೆಗೆ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಉಪಲೋಕಾಯುಕ್ತರು ಜ. 21 ರಂದು ಸಂಜೆ ಬೆಂಗಳೂರಿನಿಂದ ಹೊರಟು, ರಾತ್ರಿ 8 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸಿ, ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು. ಜ.22 ರಂದು ಬೆಳಿಗ್ಗೆ 10 ರಿಂದ 1.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 05 ರವರೆಗೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ. ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ ಆದರಿಂದ ತೊಂದರೆಗೊಳಗಾದ ಸಾರ್ವಜನಿಕರು ಉಪಲೋಕಾಯುಕ್ತರ ಮುಂದೆ ತಮ್ಮ ಅಹವಾಲುಗಳನ್ನು ಅರ್ಜಿ ನಮೂನೆ-1 ಮತ್ತು ನಮೂನೆ-2 ರಲ್ಲಿ ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷ್ಯಾಧಾರಗಳೊಂದಿಗೆ ಸಲ್ಲಿಸಬಹುದಾಗಿದೆ. ಸಂಜೆ 5.30 ಗಂಟೆಗೆ ಎಸ್.ಜಿ. ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ ಕುರಿತಂತೆ ಶಿಕ್ಷಣ, ರೇಷ್ಮೆ, ಕೃಷಿ, ತೋಟಗಾರಿಕೆ ಇಲಾಖೆಗಳು, ಆರ್‍ಟಿಒ, ಸಬ್‍ರಿಜಿಸ್ಟರ್, ಸಮಾಜ ಕಲ್ಯಾಣ ಹಾಗೂ ನ್ಯಾಯಾಂಗ ಇಲಾಖೆ ಅಧಿಕಾರಿಗಳಿಗೆ ಏರ್ಪಡಿಸಿರುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಜ.23 ರಂದು ಬೆ. 9.45 ಗಂಟೆಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಆವರಣದಲ್ಲಿನ ಬಾರ್ ಅಸೋಸಿಯೇಶನ್ ಸಭಾಂಗಣದಲ್ಲಿ ವಕೀಲರ ಸಂಘ ಹಾಗೂ ಚಿತ್ರದುರ್ಗ ಬಾರ್ ಅಸೋಸಿಯೇಶನ್ ಸದಸ್ಯರೊಂದಿಗೆ ಸಾರ್ವಜನಿಕ ಆಡಳಿತ ಮತ್ತು ಗುಡ್ ಗೌರ್ನೆನ್ಸ್ ಕುರಿತು ಸಂವಾದ ನಡೆಸುವರು. ಬೆಳಿಗ್ಗೆ 11 ರಿಂದ 11.30 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆ. 11.30 ರಿಂದ 1.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ಈಗಾಗಲೆ ದಾಖಲಾಗಿರುವ (ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ) ಪ್ರಕರಣಗಳ ಕುರಿತು ತನಿಖೆ, ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸುವರು. ಆದ್ದರಿಂದ ದೂರುದಾರರು ಮತ್ತು ಎದುರುದಾರರು ನಿಗಧಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು.

ಜ. 24 ರಂದು ಬೆ. 09 ರಿಂದ 10 ಗಂಟೆಯವರೆಗೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯ ನ್ಯಾಯಾಂಗ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆ. 10.15 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 12 ರಿಂದ 02 ಗಂಟೆಯವರೆಗೆ ಹಾಗೂ ಮಧ್ಯಾಹ್ನ 03 ರಿಂದ ಸಂಜೆ 05 ರವರೆಗೆ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡುವರು ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading