February 15, 2026
IMG-20260215-WA0316.jpg

ಹೊಸದುರ್ಗ ಫೆ.15.ಯುವ ಪೀಳಿಗೆ ಭಕ್ತಿಯ ಮಾರ್ಗದಲ್ಲಿ ನಡೆಯುವ ಮೂಲಕ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಹೇಳಿದರು.ತಾಲೂಕಿನ ಹಾಲುರಾಮೇಶ್ವರ ಕ್ಷೇತ್ರದಲ್ಲಿ ಭಾನುವಾರ ಶಿವರಾತ್ರಿ ಅಂಗವಾಗಿ ಹಾಲು ರಾಮೇಶ್ವರ ಸ್ವಾಮಿ ಹಾಗೂ ಗಂಗಾ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತನ್ನು ಬಯಸಿ ಅವರು ಮಾತನಾಡಿದರು.
ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ದೇವರ ಪೂಜೆ–ಪುನಸ್ಕಾರಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಶಿವರಾತ್ರಿ ದಿನ ಶಿವನಾಮ ಸ್ಮರಣೆ ಹಾಗೂ ಜಾಗರಣೆ ಹಿಂದೂ ಧರ್ಮದ ಎಲ್ಲಾ ಭಕ್ತಾದಿಗಳು ಆಚರಿಸಿಕೊಂಡು ಬರುತ್ತಿದ್ದಾರೆ. ಹಾಲುರಾಮೇಶ್ವರ ಕ್ಷೇತ್ರ ಪಾವನ ಪುಣ್ಯಕ್ಷೇತ್ರವಾಗಿದ್ದು, ಇಲ್ಲಿ ನಿತ್ಯವೂ ಸಾವಿರಾರು ಭಕ್ತರು ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ನಾಡಿಗೆ ಉತ್ತಮ ಮಳೆ–ಬೆಳೆ ಲಭಿಸಿ ಜನತೆಗೆ ಸುಖ–ಶಾಂತಿ ದೊರಕಲಿ ಎಂದು ಅವರು ಹಾರೈಸಿದರು.
ಈ ಸಂದರ್ಭದಲ್ಲಿ ಶಾಸಕ ಬಿಜಿ ಗೋವಿಂದಪ್ಪ, ಜವಳಿ ನಿಗಮದ ಮಾಜಿ ಅಧ್ಯಕ್ಷ ಗೋ ತಿಪ್ಪೇಶ್, ಆಗ್ರೋ ಶಿವಣ್ಣ, ನಾಗತೀಹಳ್ಳಿ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪೋಟೋ: 15ಎಚ್‌ಎಸ್‌ಡಿ4
ಹೊಸದುರ್ಗ ತಾಲೂಕಿನ ಹಾಲುರಾಮೇಶ್ವರ ಕ್ಷೇತ್ರದಲ್ಲಿ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಹಾಗೂ ಶಾಸಕ ಬಿಜಿ ಗೋವಿಂದಪ್ಪ ವಿಶೇಷ ಪೂಜೆ ಸಲ್ಲಿಸಿದ ಕ್ಷಣ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading