ಬೆಂಗಳೂರು, ಏಪ್ರಿಲ್ 15: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಕರ್ನಾಟಕ ಪ್ರವಾಸದ ಅಂಗವಾಗಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ, ಶ್ರೀಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದರು.
ಇದಕ್ಕೂ ಮುನ್ನ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ಮೋದಿ ಅವರಿಗೆ ಹೂಗುಚ್ಚ ನೀಡಿ ಗೌರವ ಸಲ್ಲಿಸಿದರು.
ಅದೇ ವೇಳೆ, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ಮನವಿ ಪತ್ರವನ್ನೂ ಪ್ರಧಾನಮಂತ್ರಿಗಳಿಗೆ ಸಲ್ಲಿಸಲಾಯಿತು. ಈ ಮನವಿ ಪತ್ರದಲ್ಲಿ ಒಟ್ಟು 18 ಬೇಡಿಕೆಗಳನ್ನು ಒಳಗೊಂಡಿದ್ದು, ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ, ರೈಲು ಸಂಪರ್ಕ ವಿಸ್ತರಣೆ, ಕುಡಿಯುವ ನೀರಿನ ಯೋಜನೆಗಳು ಹಾಗೂ ಹೆಚ್ಚುವರಿ ಹಣಕಾಸು ಅನುದಾನಗಳ ಕುರಿತು ಗಮನ ಸೆಳೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮನವಿ ಪತ್ರ ಸ್ವೀಕರಿಸಿದ ಪ್ರಧಾನಮಂತ್ರಿ ಮೋದಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕೆಲಕಾಲ ಚರ್ಚೆ ನಡೆಸಿ, ನಂತರ ಮಂಡ್ಯದತ್ತ ಪ್ರಯಾಣ ಬೆಳೆಸಿದರು.
ಈ ಭೇಟಿ ರಾಜ್ಯದ ಅಭಿವೃದ್ಧಿ ವಿಚಾರಗಳಲ್ಲಿ ಮಹತ್ವದ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
About The Author
Discover more from JANADHWANI NEWS
Subscribe to get the latest posts sent to your email.