ಚಳ್ಳಕೆರೆ ಮೇ 15 ನಾನು ಕೆಲಸ ಕೂಡಿ ಎಂದು ಹೇಳಬಹುದು ಆದರೆ ಕೆಲಸ ಮಾಡದೆ ಬಿಲ್ ಮಾಡಿ ಕೂಡಿ ಎಂದು ಹೇಳುವುದಿಲ್ಲ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಡುವಂತೆ ಅಧಿಕಾರಿಗಳಿಗೆ ಶಾಸಕಿ ಟಿ ರಘುಮೂರ್ತಿ ಸೂಚನೆ ನೀಡಿದರು.
ನಾಗರದ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನರೇಗಾ ಯೋಜನೆಯಲ್ಲಿ ರೇಷ್ಮೆ.ಕೃಷಿ.ಜಾನುವಾರು ಶೆಡ್.ಗ್ರಾಮೀಣ ರಸ್ತೆಗಳು ಹಾಗೂ ರೈತರ ಜಮೀನುಗಳಿಗೆ ಹೋಗುವ ರಸ್ತೆಗಳು ಅಭಿವೃದ್ಧಿ ಪಡಿಸುವಂತೆ ಕೃಷಿ.ತೋಟಗಾರಿಕೆ.ಪಶುಸಂಗೋಪನೆ ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸಿ ಡಿ ಟಿ ಒ ಹರಿಪ್ರಸಾದ್ ಸಭೆಗೆ ಮಾಹಿತಿ ನೀಡುತ್ತಾ 20 ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ನಿವೀಶನ ಲಭ್ಯವಿಲ್ಲ ಎಂದು ಹಿಂಬರಹ ನೀಡಿದ್ದಾರೆ ಎಂದು ಮಾಹಿತಿ ನೀಡಿದಾಗ ಶಾಸಕ ಟಿ ರಘುಮೂರ್ತಿ ಮಧ್ಯೆ ಪ್ರವೇಶಮಾಡಿ ಮಾತನಾಡಿ ಅಂಗನವಾಡಿ ಕೇಂದ್ರಗಳ ಗರ್ಭಿಣಿ ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ವಿತರಣೆ ಮಾಡುವ ಕಳಪೆಯಾಗಿದೆ ಎಂದು ಜಿಲ್ಲಾಪಂಚಾಯತ್ ಸಭೆಯಲ್ಲಿ ಚರ್ಚೆಯಾಗಿದ್ದು ಈ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡುವ ಮೂಲಕ ಸರ್ಕಾರದ ಜನಪರವಾದ ಆಶಯವನ್ನು ಅಧಿಕಾರಿಗಳು ಈಡೇರಿಸಬೇಕು ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.







ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಳೆದ ಸೋಮವಾರ ಕೆಡಿಪಿ ಸಭೆಯನ್ನು ವೀರಭದ್ರ ಸ್ವಾಮಿ ಜಾತ್ರೆ ಪ್ರಯುಕ್ತ ಅರ್ಧಕ್ಕೆ ಮೊಟಕುಗೊಳಿಸಿದ್ದರಿಂದ ಗುರುವಾರ ಪುನರಾರಂಭಗೊಂಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರದ ಗೃಹಲಕ್ಷ್ಮಿ ಗೃಹ ಜ್ಯೋತಿ ಅನ್ನಭಾಗ್ಯ ಶಕ್ತಿ ಯುವನಿಧಿ ಕಾರ್ಯಕ್ರಮಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗದಂತೆ ಅಧಿಕಾರಿಗಳು ನಿಗ ವಹಿಸಬೇಕು ಫಲಾನುಭವಿಗಳು ಅರ್ಜಿ ಹಾಕಿದಾಗ ಅದರ ಸಾಧಕ ಬಾಧಕಗಳನ್ನು ಸೂಕ್ತವಾಗಿ ಪರಾಮರ್ಶಿಸಿ ಕ್ರಮ ಕೈಗೊಂಡು ಅದರ ಪ್ರಯೋಜನವನ್ನು ಪಡೆಯುವಂತೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.
ಸಭೆಯಲ್ಲಿ ರೇಷ್ಮೆ ಇಲಾಖೆ ಅಧಿಕಾರಿಯಿಂದ ಮಾಹಿತಿ ಪಡೆದ ಶಾಸಕರು ರೇಷ್ಮೆ ಬೆಳೆಯಲ್ಲಿ ಉತ್ತಮವಾದ ಲಾಭಾಂಶವಿರುವ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ರೈತರನ್ನು ರೇಷ್ಮೆ ಬೆಳೆ ಬೆಳೆಯಲು ಪ್ರೋತ್ಸಾಹಿಸಬೇಕು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.
ಮೃತಪಟ್ಟ ಧನ ಕರುಗಳಿಗೆ ಪರಿಹಾರ ಒದಗಿಸಿ: ಪಶುಸಂಗೋಪನ ಇಲಾಖೆ ಅಧಿಕಾರಿ ರೇವಣ್ಣ ರಿಂದ ದನ ಕರುಗಳ ಸಾವಿನ ಬಗ್ಗೆ ಮಾಹಿತಿ ಪಡೆದ ಶಾಸಕರು ರೈತರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಹಸು ದನ ಕರುಗಳು ಸಾವನ್ನಪ್ಪಿದರೆ ಅನುಗ್ರಹ ಯೋಜನೆ ಅಡಿಯಲ್ಲಿ ರಕ್ಷಣಾ ಪರಿಹಾರ ಕಾರ್ಯವನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆ ನಡೆಯುತ್ತಿರುವಾಗ ರೈತ ಮುಖಂಡರು ಆಗಮಿಸಿ ಪರಿಶಿಷ್ಟ ಜಾತಿ ಪಂಗಡದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸೂಕ್ತವಾದ ವಿದ್ಯುತ್ ದೊರೆಯಿದೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ನಮ್ಮ ಗಮನಕ್ಕೆ ತಂದಿದ್ದಾರೆ ಎಂದು ಶಾಸಕರ ಗಮನ ಸೆಳೆದಾಗ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು ಹಾಸ್ಟೆಲ್ ನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಯಾವುದೇ ಕುಂದು ಕೊರತೆಗಳು ಉಂಟಾಗದಂತೆ ನಿಗ ವಹಿಸಬೇಕು ನಾನು ಅನಿರೀಕ್ಷಿತವಾಗಿ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮುಂದಿನ ದಿನಗಳಲ್ಲಿ ಮಾಹಿತಿ ಪಡೆಯುತ್ತೇನೆ ಶೌಚಾಲಯ ಕುಡಿಯುವ ನೀರು, ಊಟ ಉಪಚಾರದ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಮಾಡಬೇಕು ವಿದ್ಯಾರ್ಥಿಗಳು ದೂರುಗಳನ್ನು ನೀಡಿದಲ್ಲಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಂಗನವಾಡಿಗಳಲ್ಲಿ ಎಲ್ ಕೆ ಜಿ ಯುಕೆಜಿ: ಸಭೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಹರಿಪ್ರಸಾದ್ ಮಾಹಿತಿ ನೀಡಿ ಗೃಹಲಕ್ಷ್ಮಿ ಯೋಜನೆಯು ತಾಲೂಕಿನಲ್ಲಿ ಸಮರ್ಥವಾಗಿ ಜಾರಿಗೊಳಿಸಿದ್ದು ಪಡಿತರ ಚೀಟಿಯಲ್ಲಿನ ಸಮಸ್ಯೆಗಳಿಂದಾಗಿ ಇನ್ನೂ ಕೆಲವು ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲು ಸಾಧ್ಯವಾಗಿಲ್ಲ ಆಹಾರ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರದಲ್ಲಿಯೇ ಗೃಹಲಕ್ಷ್ಮಿ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಕೈಗೊಳ್ಳಲಾಗುವುದು ಅಲ್ಲದೆ ಮುಂಬರುವ ಜೂನ್ ಒಂದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಆದೇಶ ನೀಡಿದ್ದು ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪಿಯುಸಿ ಹಾಗೂ ಪದವಿ ಪೂರೈಸಿರುವ ಆಯ್ದ ಕಾರ್ಯಕರ್ತೆಯರನ್ನು ಎಲ್ ಕೆ ಜಿ ಹಾಗೂ ಯುಕೆಜಿ ತರಗತಿಗಳಿಗೆ ಬೋಧನೆ ಮಾಡಲು ನಿಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.
ಮಳೆಗಾಲದಲ್ಲಿ ಎಚ್ಚರಿಕೆವಹಿಸಿ: ತಾಲೂಕಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಸಂಪರ್ಕದಲ್ಲಿದ್ದು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ ಸರ್ಕಾರಕ್ಕೆ ಪರಿಹಾರಕ್ಕಾಗಿ ಪ್ರಸ್ತಾವನೆಯನ್ನು ಸಲ್ಲಿಸುವ ಜವಾಬ್ದಾರಿ ಹೊರಬೇಕು ಎಂದು ಇದೇ ವೇಳೆ ತಿಳಿಸಿದರು.
ತಾಲೂಕಿನ ಸಮಸ್ಯೆಗಳಿಗೆ ಸ್ಪಂದಿಸುವೆ: ಸಭೆಯಲ್ಲಿ ಹಾಜರಿದ್ದ ಅಪಾರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಮಾತನಾಡಿ ತಾಲೂಕಿನಲ್ಲಿ ಯಾವುದೇ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳಿದ್ದರೆ ಸೂಕ್ತವಾಗಿ ಸ್ಪಂದಿಸಲು ಜಿಲ್ಲಾಡಳಿತ ಸಿದ್ಧವಿದೆ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿದಾಗ ಮಾತ್ರ ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ತಳಮಟ್ಟದ ಸಿಬ್ಬಂದಿಗಳಿಂದ ಹಿಡಿದು ಅಧಿಕಾರಿಗಳ ಮಟ್ಟದವರೆಗೂ ಸಮರ್ಥವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗಳಾದ ಕುಮಾರಸ್ವಾಮಿ, ಉಪ ಕಾರ್ಯದರ್ಶಿ ಗಳಾದ ತಿಮ್ಮಣ್ಣ, ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರವಿಕುಮಾರ್, ಪೌರಾಯುಕ್ತರಾದ ಜಗ್ಗರೆಡ್ಡಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಶೋಕ್, ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ವಿರುಪಾಕ್ಷಪ್ಪ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಬಸವರಾಜ್, ರಮೇಶ್, ಸುರೇಶ್, ಶ್ರೀಮತಿ ನೇತ್ರಾವತಿ, ವಿಶ್ವನಾಥ ರೆಡ್ಡಿ, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.