July 15, 2026
IMG-20260715-WA0168



ಚಳ್ಳಕೆರೆ: ಗ್ರಾಮೀಣ ಭಾಗದ ಎಲ್ಲಾ ಅರ್ಹ ಕುಟುಂಬಗಳು ವಿಕಸಿತ ಭಾರತ್ ಗ್ಯಾರೆಂಟಿ ಫಾರ್ ರೋಜಗಾರ್ ಆ್ಯಂಡ್ ಅಜೀವಿಕ್ ಮಿಷನ್ (ಗ್ರಾಮೀಣ) ಯೋಜನೆಯಡಿ ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಾಲ್ಲೂಕು ಐಇಸಿ ಸಂಯೋಜಕರಾದ ಪ್ರವೀಣ್ ಕುಮಾರ ಡಿ. ಅವರು ಜಾಗೃತಿ ಸಭೆಯಲ್ಲಿ ಕರೆ ನೀಡಿದರು.
ಅವರು ಮಾತನಾಡಿ, ಯೋಜನೆಯಡಿ ಪ್ರತಿ ಅರ್ಹ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ಮಾನವ ದಿನಗಳ ಉದ್ಯೋಗ ಕಲ್ಪಿಸಲಾಗುತ್ತಿದ್ದು, ಪುರುಷರು ಹಾಗೂ ಮಹಿಳೆಯರಿಗೆ ಸಮಾನ ಕೂಲಿ ನೀಡಲಾಗುತ್ತದೆ. ಪ್ರಸ್ತುತ ಒಂದು ದಿನದ ಕೂಲಿ ₹382 ನಿಗದಿಯಾಗಿದ್ದು, ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶವನ್ನು ಗ್ರಾಮೀಣ ಕುಟುಂಬಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಯೋಜನೆಯಡಿ 318 ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದ್ದು, ಪ್ರತಿ ಕುಟುಂಬವು 125 ದಿನಗಳ ಉದ್ಯೋಗವನ್ನು ಪೂರ್ಣಗೊಳಿಸಿದಲ್ಲಿ ವಾರ್ಷಿಕ ₹47,750 ಆದಾಯ ಗಳಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬಹುದು ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಮನೆ-ಮನೆಗೆ ಭೇಟಿ ನೀಡಿ ಕರಪತ್ರಗಳನ್ನು ವಿತರಿಸುವ ಮೂಲಕ ಯೋಜನೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading