
ಸರಳ, ಸಜ್ಜನಿಕೆಯ ರಾಜಕಾರಣಿ, ಅಭಿವೃದ್ದಿಯ ಹರಿಕಾರ, ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ ಜನಮನ್ನಣೆ ಗಳಿಸಿರುವ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ತಾಲೂಕು ಪಂಚಾಯತಿ ಮಾಜಿ ಸದಸ್ಯ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್. ಸಮರ್ಥರಾಯ್ ಆಗ್ರಹಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಳೆದ ಮೂರೂ ವಿಧಾಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸತತ ಗೆಲುವು ಸಾಧಿಸಿರುವ ಟಿ.ರಘುಮೂರ್ತಿ ಅವರು ಚಳ್ಳಕೆರೆ ವಿಧಾಸಭಾ ಕ್ಷೇತ್ರದ ಇತಿಹಾಸದಲ್ಲೇ ಯಾರೂ ಮಾಡದಂತ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.
ಚಳ್ಳಕೆರೆಯಲ್ಲಿ ಸರ್ಕಾರಿ ಇಂಜಿನಿಯರಿAಗ್ ಕಾಲೇಜು ಸ್ಥಾಪನೆ, ಮಿನಿ ವಿಧಾನಸೌಧ ನಿರ್ಮಾಣ, ವಿಶಾಲ ರಸ್ತೆಗಳು, ಸೇರಿದಂತೆ ಇಡೀ ಕ್ಷೇತ್ರದಲ್ಲಿ ಜಾತಿ ಧರ್ಮ ಬೇಧವಿಲ್ಲದೆ ಸೇವೆ ಸಲ್ಲಿಸುತ್ತಿದ್ದಾರೆ. ಚಳ್ಳಕೆರೆ ಶಾಶ್ವತ ಬರಪೀಡಿತ ಪ್ರದೇಶವಾಗಿದ್ದು ಇಂತಹ ಪ್ರದೇಶಕ್ಕೆ ನೀರನ್ನು ಹರಿಸಿ ಬರದ ನಾಡಿನ ಭಗಿರಥ ವೆನಿಸಿದ್ದಾರೆ,ಈ ಮೂಲಕ ಸಾವಿರಾರು ರೈತರಿಗೆ ನೀರಾವರಿ ಕೃಷಿ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಇದರ ಜೊತೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಕೂಡ ಅನುಷ್ಠಾನಗೊಳಿಸಿದ್ದಾರೆ ,ಒಟ್ಟಾರೆಯಾಗಿ ಒಬ್ಬ ದೂರದೃಷ್ಟಿಯ ನಾಯಕ ಚಳ್ಳಕೆರೆಗೆ ಶಾಸಕರಾಗಿ ಆಯ್ಕೆಯಾಗಿದ್ದು ಇಡೀ ಕ್ಷೇತ್ರದ ಸೌಭಾಗ್ಯವೆಂದೆ ಹೇಳಬಹುದು ಅವರಿಗೆ ಮಂತ್ರಿ ಸ್ಥಾನ ನೀಡಿದರೆ ಮತ್ತಷ್ಟು ಅಭಿವೃದ್ಧಿ ಕಾರ್ಯಕೈಗೊಳ್ಳಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದೆ ಹಟ್ಟಿ ಚಿನ್ನದ ಗಣಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿ,ಇದೀಗ ಸಣ್ಣ ಕೈಗಾರಿಕಾ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇಡೀ ಜಿಲ್ಲೆಯಲ್ಲಿ ಅಭಿವೃದ್ಧಿ ವಿಚಾರದಲ್ಲಿ ಅನುಭವವಿರುವ ಇವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದು ನಾಯಕ ಸಮುದಾಯವನ್ನು ಪ್ರತಿನಿಧಿಸಿರುವ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು.
ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 136 ಸ್ಥಾನಗಳನ್ನು ಪಡೆದಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಮೊದಲಿಗರಾಗಿದ್ದಾರೆ. ಸರ್ಕಾರದ ರಚನೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಆಗ ಆಗಿರಲಿಲ್ಲ. ಈಗ ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಶಾಸಕರನ್ನು ಹಾಗೂ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಲಿದ್ದು ಇಂತಹ ಅನುಭವಿಗೆ ಅವಕಾಶ ಕೊಟ್ಟರೆ ಜಿಲ್ಲೆಯಲ್ಲಿನ ಹಿಂದುಳಿದ ವರ್ಗ, ಶೋಷಿತ ಸಮುದಾಯಗಳ, ಬಡವರ, ದೀನ ದಲಿತರ ಪರವಾಗಿ ದುರ್ಬಲರ ಏಳಿಗೆಗಾಗಿ ಶ್ರಮಿಸಲಿದ್ದಾರೆ. ಜನಾನುರಾಗಿ,ಸಾಮಾನ್ಯ ವ್ಯಕ್ತಿಯನ್ನು ಕೂಡ ಗೌರವದಿಂದ ಮಾತನಾಡಿಸುವ ಜನಪರ ಶಾಸಕ ಟಿ. ರಘುಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ
ಹೆಚ್. ಸಮರ್ಥರಾಯ 9611707341
About The Author
Discover more from JANADHWANI NEWS
Subscribe to get the latest posts sent to your email.