
ಚಿತ್ರದುರ್ಗಸೆ.15:
ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಸೆ.18 ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಜಿಲ್ಲೆಯ ರೈತರಿಗೆ “ಅಣಬೆ ಬೇಸಾಯ ಹಾಗೂ ಮೌಲ್ಯವರ್ಧನೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ಫಾರಂ ತೋಟಗಾರಿಕೆ ಮಹಾವಿದ್ಯಾಲಯ ಕೃಷಿ ಸೂಕ್ಷ್ಮಜೀವಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕ ಗೊರಪ್ಪನವರ ಭರಮಪ್ಪ ಅವರು ಉತ್ತಮ ಅಣಬೆಯ ವಿವಿಧ ತಳಿಗಳ ಆಯ್ಕೆ, ಬೇಸಾಯ ಕ್ರಮ, ನಿರ್ವಹಣೆ ಬಗ್ಗೆ ವಿಷಯ ಮಂಡನೆ ಮತ್ತು ಅಣಬೆ ಬೆಳೆಯುವ ಪ್ರಾತ್ಯಕ್ಷಿಕೆ ಮಾಡಲಿದ್ದಾರೆ.
ಹಿರಿಯೂರು ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿಗಳಾದ ಡಾ. ಸರಸ್ವತಿ ಜೆ ಎಂ ಅವರು ಅಣಬೆ ಮೌಲ್ಯವರ್ಧನೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ನಂತರ ಯಶಸ್ವಿಯಾಗಿ ಅಣಬೆ ಬೆಳೆದ ರೈತರು ತಮ್ಮ ಅಣಬೆ ಕೃಷಿಯ ಅನುಭವವನ್ನು ರೈತರೊಂದಿಗೆ ಹಂಚಿಕೊಳ್ಳುವರು. ಆದ ಪ್ರಯುಕ್ತ ಆಸಕ್ತ 50 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿಯನ್ನು ತರುವಂತೆ ಕೋರಿದೆ.
About The Author
Discover more from JANADHWANI NEWS
Subscribe to get the latest posts sent to your email.