September 16, 2025
IMG-20241115-WA0176.jpg

ಚಳ್ಳಕೆರೆ: ವಿದ್ಯಾರ್ಥಿಗಳು ಪಟ್ಯ ಚಟುವಟಿಕೆಗಳ ಜೊತೆಗೆ ಪಟ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಉನ್ನತ ಮಟ್ಟಕ್ಕೆ ಏರುವಂತಾಗಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ ತಿಮ್ಮಯ್ಯ ಕರೆ ನೀಡಿದರು. 

ನಗರದ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಸಾಂಸ್ಕೃತಿಕ ಪ್ರದರ್ಶನಗಳ ಕಾರ್ಯಕ್ರಮವನ್ನು ಸಂಗೀತ ವಾದ್ಯ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಎಲ್ಲ ರಂಗಗಳಲ್ಲಿ ಸ್ಪರ್ಧಾತ್ಮಕತೆ ಹೆಚ್ಚುತ್ತಿದೆ ವಿದ್ಯಾರ್ಥಿಗಳು ಸೋಲು ಅನುಭವಿಸಿದಾಗ ಹತಾಶರಾಗದೆ ಥಾಮಸ್ ಆಲ್ವಾ ಎಡಿಸನ್ ರವರು ವಿದ್ಯುತ್ ಬಲ್ಬ್ ತಯಾರಿಸುವಾಗ ಸಾವಿರ ಬಾರಿ ಸೋಲನ್ನು ಕಂಡಿದ್ದರು ಸಹ ತನ್ನ ಪ್ರಯತ್ನ ಬಿಡದೆ ಯಶಸ್ಸು ಸಾಧಿಸಿದಂತಹ ಇಚ್ಚ ಶಕ್ತಿಯನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಇತರೆ ವಿಷಯಗಳಲ್ಲಿ ಯಶಸ್ಸು ಸಾಧಿಸಬೇಕು ಸರ್ಕಾರ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಹಾಗೂ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲೆಂದು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಕಾರ್ಯಕ್ರಮದಲ್ಲಿ ಒಟ್ಟು ಹನ್ನೊಂದು ಸ್ಪರ್ಧೆಗಳಿದ್ದು ತೀರ್ಪುಗಾರರ ತೀರ್ಮಾನ ಅಂತಿಮವಾಗಿದ್ದು ಇಲ್ಲಿ ವಿಜೇತರಾದವರು ಜಿಲ್ಲಾ ಮಟ್ಟ ವಿಭಾಗ ಮಟ್ಟ ಹಾಗೂ ರಾಜ್ಯಮಟ್ಟದಲ್ಲಿ ಸ್ಪರ್ಧೆ ಮಾಡಲು ಅವಕಾಶ ದೊರೆಯುತ್ತದೆ 

 ಎಂದು ತಿಳಿಸಿದರು. 

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪದವಿಪೂರ್ವ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ ಚಳ್ಳಕೆರೆ ಬರಪೀಡಿತ ತಾಲೂಕು ಎಂಬ ಹಣೆ ಪಟ್ಟಿಯನ್ನು ಹೊಂದಿದ್ದರು ಸಾಂಸ್ಕೃತಿಕವಾಗಿ ಅತ್ಯಂತ ಶ್ರೀಮಂತಿಕೆಯನ್ನು ತನ್ನ ಮಡಿಲಲ್ಲಿ ಇಟ್ಟುಕೊಂಡಿದೆ ಇದಕ್ಕೆ ಜಾನಪದ ಸಿರಿಯಜ್ಜಿ ತರಾಸು ಮೀರಾಸಾಬಿಹಳ್ಳಿ ಶಿವಣ್ಣ ಸೇರಿದಂತೆ ಅನೇಕ ಹಿರಿಯ ಹಾಗೂ ಕಿರಿಯ ಸಾಹಿತಿಗಳು ಸಾಹಿತ್ಯ ಲೋಕಕ್ಕೆ ತಮ್ಮ ಕೊಡುಗೆಯನ್ನು ನೀಡಿದ್ದಾರೆ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲು ಇಂತಹ ವೇದಿಕೆಗಳು ಸಹಕಾರಿಯಾಗಲಿದ್ದು ಸೋಲು ಗೆಲುವಿನ ಬಗ್ಗೆ ಚಿಂತಿಸದೆ ಇಲ್ಲಿ ಏರ್ಪಡಿಸಿರುವ ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಸಾಮರ್ಥ್ಯವನ್ನು ಓರೆಗೆ ಹಚ್ಚುವಂತಹ ಕಾರ್ಯನಿರ್ವಹಿಸಿ ಎಂದು ತಿಳಿಸಿದರು.

ಉಪನ್ಯಾಸಕ ಶ್ರೀನಿವಾಸ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣ ಒಂದೇ ಮಾನದಂಡ ಎಂಬ ಪರಿಕಲ್ಪನೆಯನ್ನು ಬದಿಗೊತ್ತಿ ತನ್ನ ಪ್ರತಿಭೆಯಿಂದಲೂ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂಬ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಸರ್ಕಾರಿ ನೌಕರ ಸಂಘದ ನಿರ್ದೇಶಕ ಎಂ ಶ್ರೀನಿವಾಸ್ ಕಿ ವಿ ಚಂದ್ರಶೇಖರ್ ಎನ್ಎಸ್ಎಸ್ ಅಧಿಕಾರಿ ಶಾಂತಕುಮಾರಿ ಪ್ರಾಚಾರ್ಯರಾದ ದೇವರಾಜ್ ಭೀಮರಾಜ್ ಉಪನ್ಯಾಸಕರಾದ ನಾಗರಾಜ್.ವಸಂತ್ ಕುಮಾರ್ ಹಬೀಬ್ ಉಲ್ಲಾ ಲಲಿತಮ್ಮ ಪುಷ್ಪಲತಾ ಉಪಸ್ಥಿತರಿದ್ದರು. 

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading