
ಹಿರಿಯೂರು :
ತಾಲ್ಲೂಕಿನ ಹೊಸಯಳನಾಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಸವನಹಳ್ಳಿ ಗ್ರಾಮದ ಗ್ರಾಮ ಪಂಚಾಯತಿ ಉಪಚುನಾವಣೆಗೆ ನರಸಿಂಹಯ್ಯ ಛಲವಾದಿ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಶ್ರೀಯುತ ನರಸಿಂಹಯ್ಯರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ನರಸಿಂಹಯ್ಯ ಛಲವಾದಿಯವರಿಗೆ ಆಯ್ಕೆಯಾದ ಬಗ್ಗೆ ದಾಖಲೆಗಳನ್ನು ಈ ಸಂದರ್ಭದಲ್ಲಿ ವಿತರಿಸಿದರು.
ಈ ಕುರಿತು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಮಾತನಾಡಿ, ಶ್ರೀಯುತ ನರಸಿಂಹ ಛಲವಾದಿ ಅವರು ಹಾಲಿ ಆಲೂರು ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಗ್ರಾಮದ ಸೇವೆಯನ್ನು ಚಾಚು ತಪ್ಪದೇ ಮಾಡುತ್ತಿದ್ದಾರೆ,
ಅಲ್ಲದೆ ನರಸಿಂಹ ಛಲವಾದಿ ಅವರು ಎಲ್ಲಾ ಕೆಲಸಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಜನಾಂಗದ ಪ್ರೀತಿ ವಿಶ್ವಾಸವನ್ನು ಗಳಿಸಿ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಶ್ರೀಯುತ ನರಸಿಂಹ ಛಲವಾದಿರವರ ರಾಜಕೀಯ ಜೀವನ ಶುಭಕರವಾಗಿರಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕಸವನಹಳ್ಳಿ ಮುಖಂಡರಾದ ಆರ್ ಪ್ರಕಾಶ್, ರಾಮಚಂದ್ರ ಕಸವನಹಳ್ಳಿ, ಲೋಕಾಭಿರಾಮಯ್ಯ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.