ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ತಾಲೂಕಿನ ಮಾಳನಾಯಕನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರೇಣುಕಾ ರಂಗಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಜ್ಯೋತಿ ಕೆಂಪರಾಜು ಆಯ್ಕೆಯಾಗಿದ್ದಾರೆ.
ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರೇಣುಕಾ ರಂಗಸ್ವಾಮಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಕೆಂಪರಾಜು ನಾಮಪತ್ರ ಸಲ್ಲಿಸಿದ್ದರು. ಇವರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಇಲಾಖೆಯ ರವಿಯವರು ಅಧಿಕೃತವಾಗಿ ಘೋಷಣೆ ಮಾಡಿದರು.
ಚುನಾವಣೆ ಪ್ರಕ್ರಿಯೆಯಲ್ಲಿ ಸಂಘದ ನಿರ್ದೇಶಕರುಗಳಾದ ತೋಳಸಮ್ಮ, ಸುಲೋಚನಾ, ಶಕುಂತಲಾ, ಸುಗುಣ, ಪುಷ್ಪಲತಾ, ಕಾರ್ಯದರ್ಶಿ ಮಂಜುಳಾ, ಹಾಲು ಪರೀಕ್ಷಕಿ ಶೋಭಾ ಪಾಲ್ಗೊಂಡಿದ್ದರು.
ಚುನಾವಣೆಯ ಫಲಿತಾಂಶ ಪ್ರಕಟಗೊಂಡ ನಂತರ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಸಂಘದ ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮಿರ್ಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನೇತ್ರ, ಸದಸ್ಯ ಅರುಣ್ ಕುಮಾರ್, ಮುಖಂಡರುಗಳಾದ ರವಿ, ಚಂದ್ರೇಗೌಡ, ಯೋಗಣ್ಣ ಹಾಗೂ ಗ್ರಾಮಸ್ಥರು ಅಭಿನಂದಿಸಿದರು.
About The Author
Discover more from JANADHWANI NEWS
Subscribe to get the latest posts sent to your email.