ಚಳ್ಳಕೆರೆ ಜ.16
ಹಲವಾರು ವರ್ಷಗಳಿಂದ ಪೋಡಿ
ದುರಸ್ತಿಗೊಳ್ಳದೆ ಬಾಕಿ ಉಳಿದುಕೊಂಡಿದ್ದ
ಜಮೀನುಗಳನ್ನು ಕನಿಷ್ಠ ಮಂಜೂರಿ ದಾಖಲೆಗಳ ಪರಿಶೀಲನೆ ನಡೆಸಿ ಹೊಸ ಪಹಣಿ ಸೃಜಿಸುವ ಮೂಲಕ ರೈತರ ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಲು
ಕಂದಾಯ ಇಲಾಖೆಯು ದರಖಾಸ್ತು ದುರಸ್ತಿ
ಪೋಡಿ ಮಾರ್ಗಸೂಚಿ ನಿಯಮಗಳನ್ನು
ಸರಳೀಕರಣಗೊಳಿಸಲಾಗಿದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ತಿಳಿಸಿದರು.

ಚಳ್ಳಕೆರೆ ತಾಲೂಕಿನಲ್ಲಿ ಭೂ ಮಂಜೂರಿಯಂತೆ ಸರ್ಕಾರಿ ಸರ್ವೇ
ನಂಬರುಗಳಿಂದ ಪ್ರತ್ಯೇಕಿಸಿ ಹಿಡುವಳಿ
ಭೂಮಿಯನ್ನಾಗಿಸುವ ಪೋಡಿ ದುರಸ್ತಿಯ
ಪ್ರಕ್ರಿಯೆಯಲ್ಲಿನ ಕಠಿಣ ನಿಯಮಗಳನ್ನು ಸರ್ಕಾರ ಸರಳೀಕರಣ ಮಾಡಿರುವ ಪರಿಣಾಮ ಸರ್ಕಾರಿ ನಂಬರುಗಳಲ್ಲಿನ ಮಂಜೂರಿ ರೈತಾಪಿ ವರ್ಗದವರಿಗೆ ಈ ನಿಯಮಗಳಿಂದ ಅನುಕೂಲವಾಗಲಿದೆ
ಚಳ್ಳಕೆರೆ ತಾಲೂಕಿನಾದ್ಯಂತ ಕಂದಾಯ ಇಲಾಖೆಯಲ್ಲಿ ಸುಮಾರು ಎರಡು ತಿಂಗಳಿಂದ ಮಹತ್ವದ ದರಕಾಸ್ತು ಪೋಡಿ ದುರಸ್ತಿ ಕಾರ್ಯ ನಿರ್ವಹಿಸುವ ಒಟ್ಟು 891 ಪ್ರಕರಣಗಳಲ್ಲಿ ಎರಡೇ ತಿಂಗಳಿಗೆ 313 ಪ್ರಕರಣಗಳಲ್ಲಿ ಸರ್ವೆ ನಡೆಸಿ ಪೋಡಿ ದುರಸ್ತಿಗೊಳಿಸಿ ಹೊಸ ಪಹಣಿ ಮತ್ತು ಪೋಡಿ ದಾಖಲೆ ವಿತರಣೆ ಮಾಡಲು ಸಿದ್ದವಾಗಿವೆ ಜಿಲ್ಕೆಯಲ್ಲೇ ಅತಿ ಹೆಚ್ಚು ಪೋಡಿ ದುರಸ್ತಿ ಮಾಡಿದ ಚಳ್ಳಕೆರೆ ತಾಲೂಕು ಕಚೇರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.