January 29, 2026
FB_IMG_1737039587083.jpg

ಬಳ್ಳಾರಿ,ಜ.16:
ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಗುರುವಾರ ನಗರದ ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತುರ್ತು ಚಿಕಿತ್ಸಾ ವಿಭಾಗ, ಔಷಧಿ ವಿತರಣಾ ವಿಭಾಗ, ಓಬಿಜಿ ವಾರ್ಡ್ ಸೇರಿದಂತೆ ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿ-ಗತಿ ಪರಿಶೀಲಿಸಿದರು.
ವಿವಿಧ ವಾರ್ಡ್ಗಳಿಗೆ ದಾಖಲಾಗಿದ್ದ ರೋಗಿಗಳ ಆರೋಗ್ಯ ವಿಚಾರಿಸಿದರು. ರೋಗಿಗಳಿಗೆ ಗುಣಮಟ್ಟ ಸೇವೆ ನೀಡಬೇಕು ಎಂದು ಅಲ್ಲಿನ ಕರ್ತವ್ಯ ನಿರತ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವಧಿ ಮೀರಿದ ಔಷಧಿಗಳನ್ನು ವಿತರಿಸುವಂತಿಲ್ಲ;
ಜಿಲ್ಲಾ ಆಸ್ಪತ್ರೆ, ಬಿಮ್ಸ್ ಸೇರಿದಂತೆ ಯಾವುದೇ ಆಸ್ಪತ್ರೆಗಳಲ್ಲಿ ಅವಧಿ ಮೀರಿದ ಔಷಧಿ, ಶಸ್ತç ಚಿಕಿತ್ಸಕ ವಸ್ತುಗಳನ್ನು ಯಾವುದೇ ಕಾರಣಕ್ಕೂ ವಿತರಿಸುವಂತಿಲ್ಲ ಮತ್ತು ಬಳಸುವಂತಿಲ್ಲ ಎಂದು ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಔಷಧಿ ವಿತರಣಾ ವಿಭಾಗದ ವೈದ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಔಷಧಿಗೆ ಹೊರಗಡೆ ಶಿಫಾರಸ್ಸು ಮಾಡುವಂತಿಲ್ಲ;
ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ ಔಷಧಿಗಾಗಿ ಹೊರಗಡೆ ಶಿಫಾರಸ್ಸು ಮಾಡುವಂತಿಲ್ಲ, ಆಸ್ಪತ್ರೆಯಿಂದಲೇ ವಿತರಿಸುವಂತೆ ಸರ್ಕಾರದ ಸುತ್ತೋಲೆ ಇದ್ದು, ಸಾರ್ವಜನಿಕರು ಹೊರಗಡೆಯಿಂದ ಖರೀದಿಸಿ ತಂದಿರುವುದು ಕಂದುಬAದಿದೆ. ಈ ಕುರಿತು ಶಿಫಾರಸ್ಸು ಮಾಡಿದ ವೈದ್ಯಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಬಿಮ್ಸ್ ನಿರ್ದೇಶಕರಿಗೆ ಸೂಚಿಸಿದರು.
ಇದರಿಂದಾಗಿಯೇ ಬಿಮ್ಸ್ ಆಸ್ಪತ್ರೆಯ ಸುತ್ತಲೂ 20 ಕ್ಕೂ ಹೆಚ್ಚು ಔಷಧಿ ಮಳಿಗೆಗಳು ಸುತ್ತುವರೆದುಕೊಂಡಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆತ್ಮಸ್ಥೆöÊರ್ಯ ತುಂಬಿರಿ;
ಆಸ್ಪತ್ರೆಗೆ ಬರುವ ವಿವಿಧ ರೀತಿಯ ರೋಗಿಗಳಿಗೆ ಆತ್ಮಸ್ಥೆöÊರ್ಯ ತುಂಬಬೇಕು. ಸಣ್ಣ ಪುಟ್ಟ ರೋಗಕ್ಕೂ ಅವರಿಗೆ ಇನ್ನಷ್ಟು ನಿಶ್ಯಕ್ತರಾಗುವಂತೆ ಮಾಡಬಾರದು. ಸೊಪ್ಪು ತರಕಾರಿ-ಪಲ್ಯ ಸೇವಿಸುವಂತೆ ಯೋಗ-ನಿಯಮಿತ ವ್ಯಾಯಾಮ ಮಾಡುವಂತೆ ಸಲಹೆ ಮಾಡಬೇಕು ಎಂದು ಸೂಚಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭರಾಣಿ.ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಕೆ.ಎಂ.ರಾಜಶೇಖರ್, ಸಹಾಯಕ ನಿಬಂಧಕರಾದ ಶುಭವೀರ್ ಜೈನ್.ಬಿ., ಉಪ ನಿಬಂಧಕರಾದ ಅರವಿಂದ.ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಯೂ ಆದ ರಾಜೇಶ್ ಎನ್.ಹೊಸಮನೆ, ಬಳ್ಳಾರಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಸಿದ್ಧರಾಜು, ಡಿವೈಎಸ್ಪಿ ವಸಂತ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಬಸರೆಡ್ಡಿ, ಬಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಸೇರಿದಂತೆ ಬಳ್ಳಾರಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading