ಚಳ್ಳಕೆರೆ: ಕ್ಷಯರೋಗವು ಯಾವುದೇ ಶಾಪ ಪಾಪದಿಂದ ಬರುವ ಕಾಯಿಲೆಯಲ್ಲ, ಇದೊಂದು ಪುರಾತನ ಕಾಯಿಲೆ ಈ ಕಾಯಿಲೆಗೆ ಚಿಕಿತ್ಸೆ ಇದ್ದು, ರೋಗಿಗಳು ಹೆದರುವ ಅಗತ್ಯವಿಲ್ಲ. ಇದು ಮೈಕೋ ಬ್ಯಾಕ್ಟೀರಿಯಂ ಲೆಪ್ರೇ ಎಂಬ ರೋಗಾಣುವಿನಿಂದ ಬರುತ್ತದೆ. ರೋಗಿಯು ಕೆಮ್ಮುವುದರಿಂದ, ಸೀನುವುದರಿಂದ ತುಂತುರ ಹನಿಗಳ ಮುಖಾಂತರ ಆರೋಗ್ಯವಂತ ವ್ಯಕ್ತಿಯ ದೇಹ ಸೇರಿದರೆ ಈ ರೋಗವು ಹರಡುತ್ತದೆ ಎಂದು ಸಾಣೀಕೆರೆ ಆಡಳಿತ ವೈದ್ಯಾಧಿಕಾರಿ ನಾಗರಾಜ್ ಹೇಳಿದರು.




ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರ, ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಚಳ್ಳಕೆರೆ. ಪ್ರಾಥಮಿಕ ಆರೋಗ್ಯ ಕೇಂದ್ರ ಸಾಣೀಕೆರೆ ಇವರ ಸಂಯುಕ್ತಾಶ್ರಯದಲ್ಲಿ ನೆಹರು ಗ್ರಾಮಾಂತರ ಪ್ರೌಢ ಶಾಲೆ ಹಾಗೂ ಅಂಗನವಾಡಿ ಕೇಂದ್ರದಲ್ಲಿ ಕ್ಷಯರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಕೇಂದ್ರ ಸರ್ಕಾರವು ನಮ್ಮ ದೇಶವನ್ನು 2025ರ ವೇಳೆಗೆ ಕ್ಷಯ ಮುಕ್ತ ಭಾರತ’ವನ್ನು ನಿರ್ಮಿಸುವ ಗುರಿ ಹೊಂದಿದ್ದು ರೋಗ ಪತ್ತೆಯಾದಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಈ ರೋಗವು ಮೈಕೋ ಬ್ಯಾಕ್ಟೀರಿಯಂ ಎಂಬ ರೋಗಾಣುವಿನಿಂದ ಗಾಳಿಯ ಮೂಲಕ ಹರಡುತ್ತದೆ. ಇದು ಶ್ವಾಸಕೋಶವನ್ನು ಹೆಚ್ಚಾಗಿ ಬಾಧಿಸುತ್ತದೆ. ಕೂದಲು ಮತ್ತು ಉಗುರುಗಳನ್ನು ಹೊರತುಪಡಿಸಿ ದೇಹದ ಯಾವುದೇ ಭಾಗಕ್ಕೆ ರೋಗವು ತಗುಲಬಹುದು. ಲಕ್ಷಣವು ಕಂಡುಬಂದಲ್ಲಿ ಎಂಡಿಟಿ ಚಿಕಿತ್ಸೆ ಇದ್ದು ಇದನ್ನು ಪಡೆದು ಕೊಂಡರೆ, ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಆದ್ದರಿಂದ ಸಾರ್ವಜನಿಕರು ತಮ್ಮ ಮನೆಗಳಿಗೆ ಬರುವ ತಂಡಗಳಿಂದ ಪರೀಕ್ಷೆ ಮಾಡಿಸುವ ಮೂಲಕ ಸಹಕಾರಿಸಿ ರೋಗ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಯನ್ನು ಪಡೆದು ರೋಗವನ್ನು ಒಗಲಡಿಸಲು ಸಹಕರಿಸಿ ಎಂದರು.
ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತೆಯರು ಶಾಲಾ ಭೋದಕ ವರ್ಗದವರು ಮತ್ತು ವಿದ್ಯಾರ್ಥಿಗಳು ಅಂಗನವಾಡಿ ಕೇಂದ್ರದ ಸಿಬ್ಬಂದಿಗಳು ಸಾರ್ವಜನಿಕರು ಹಾಜರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.