ಹಿರಿಯೂರು ತಾಲೂಕಿನ ಮಸ್ಕಲ್ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಸಮಗ್ರ ಬೆಳವಣಿಗೆಗೆ ಆರಂಭಿಕ ಶಿಕ್ಷಣ ಅತ್ಯಂತ ಮುಖ್ಯ ಎಂದು ಹೇಳಿದರು.

















ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ್, ವೈ. ಕಾಲಾವತಿ, ಪಿಡಿಒ ಕೃಷ್ಣಮೂರ್ತಿ, ಮೇಲ್ವಿಚಾರಕಿ ಜ್ಯೋತಿ ಹಾಗೂ ಅಂಗನವಾಡಿ ಶಿಕ್ಷಕಿಯರು ಉಪಸ್ಥಿತರಿದ್ದರು. ಮಕ್ಕಳಿಗೆ ಪೌಷ್ಟಿಕ ಆಹಾರ, ಶಿಕ್ಷಣ ಮತ್ತು ಸಂಸ್ಕಾರ ನೀಡುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಮಹತ್ವದ್ದೆಂದು ತಿಳಿಸಿದರು.
About The Author
Discover more from JANADHWANI NEWS
Subscribe to get the latest posts sent to your email.