February 16, 2026
IMG-20260216-WA0370.jpg

ವರದಿ: ಕೆ.ಟಿ.ಮೋಹನ್ ಕುಮಾರ್ಸಾಲಿಗ್ರಾಮ (ಮೈಸೂರು ಜಿಲ್ಲೆ): ಸಾಲಿಗ್ರಾಮವೇ ನಮಗೆ ರಾಜಕೀಯ ಕರ್ಮಭೂಮಿ ಎಂದು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ದೊಡ್ಡಸ್ವಾಮೇಗೌಡ ಹೇಳಿದರು.ಅವರು ಸಾಲಿಗ್ರಾಮ ಪಟ್ಟಣದಲ್ಲಿ ತಾಲೂಕು ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.ಶಾಸಕ ಡಿ.ರವಿಶಂಕರ್ ಅವರು ಜಿಲ್ಲಾ ಪಂಚಾಯಿತಿಗೆ ಪ್ರವೇಶವನ್ನು ಪಡೆದಿದ್ದು ಸಾಲಿಗ್ರಾಮದಿಂದಲೇ ಈ ಕ್ಷೇತ್ರದ ಜನತೆಗೆ ನಮ್ಮ ಉಸಿರು ಇರುವವರೆಗೂ ಕೃತಜ್ಞರಾಗಿ ಇರುತ್ತೇವೆ ಎಂದರು.ಸಾಲಿಗ್ರಾಮದ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ತಾಲೂಕು ಆಸ್ಪತ್ರೆಯನ್ನಾಗಿ ಮಾಡಿಸಲಾಗಿದ್ದು 42ಕೋಟಿ ರೂ ಗಳ ವೆಚ್ಚದಲ್ಲಿ ಆಸ್ಪತ್ರೆಯನ್ನು ನಿರ್ಮಿಸಲು ಈಗಾಗಲೇ ಟೆಂಡರ್ ಕೂಡ ಆಗಿದೆ ಎಂದರು.ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ತಾಲೂಕು ಕಚೇರಿಯನ್ನು ಎಂಟು ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲು ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆ ಮೂಲಕ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.ಸಾಲಿಗ್ರಾಮ ಮತ್ತು ಕೆ.ಆರ್.ನಗರ ಎರಡು ತಾಲೂಕುಗಳಲ್ಲಿ ಸರ್ಕಾರದ ಗ್ಯಾರಂಟಿ ಕಾರ್ಯಕ್ರಮಗಳ ಜೊತೆ ಜೊತೆಯಲ್ಲೇ ಕ್ಷೇತ್ರದಲ್ಲಿ ಸುಮಾರು 700ಕೋಟಿ ರೂಗಳ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಜೊತೆಗೆ ದಶಕಗಳಿಂದಲೂ ಅಭಿವೃದ್ಧಿ ಕಾಣದೆ ಇದ್ದ ಗ್ರಾಮಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು.ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ನಿಂದ ಈಗಾಗಲೇ 2000 ಕೋಟಿ ರೂ ಸಾಲವನ್ನು ನೀಡಲಾಗಿದೆ. ಸಹಕಾರ ಸಂಘಗಳ ಮೂಲಕ ಟ್ರ್ಯಾಕ್ಟರ್, ಮನೆ ನಿರ್ಮಾಣ, ಒಡವೆ, ವಾಹನ, ಬೋರ್ ವೆಲ್ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸಹಕಾರ ಸಂಘಗಳ ಸದಸ್ಯರುಗಳು ಇವುಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿಯ ಪಥದತ್ತ ಸಾಗಬೇಕು, ಸಂಘಗಳಿಂದ ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿ ಮರಳಿ ಸಾಲವನ್ನು ಪಡೆಯಬೇಕು ಎಂದು ಕರೆ ನೀಡಿದರು.ಎಂಸಿಡಿಸಿಸಿ ಬ್ಯಾಂಕ್ ಗೆ ನಿರ್ದೇಶಕರನ್ನಾಗಿ ಮಾಡಿ ಅಧ್ಯಕ್ಷರನ್ನಾಗಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಶಾಸಕರುಗಳು, ಎಲ್ಲಾ ನಿರ್ದೇಶಕರುಗಳು ಹಾಗೂ ಸರ್ವ ಸಹಕಾರಿ ಬಂಧುಗಳಿಗೆ ಧನ್ಯವಾದಗಳು ಸಲ್ಲಿಸುತ್ತೇನೆ ಎಂದರು.ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಉದಯಶಂಕರ್, ಮಹದೇವ್, ನಗರಾಧ್ಯಕ್ಷರಾದ ಪ್ರಭಾಕರ್, ರಮೇಶ್, ಎಸ್ ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ಸಹಕಾರ ವಿಭಾಗದ ಅಧ್ಯಕ್ಷ ಪಶುಪತಿ ತೇಜೋಮೂರ್ತಿ, ವಕ್ತಾರ ಜಾಬೀರ್, ತಾ. ಪಂ. ಮಾಜಿ ಅಧ್ಯಕ್ಷ ಚಂದು, ಮಾಜಿ ಸದಸ್ಯ ಎಲ್.ಎಂ.ಸಣ್ಣಪ್ಪ, ಭೂ ನ್ಯಾಯ ಮಂಡಳಿ ಸದಸ್ಯ ಪುರಿಗೋವಿಂದರಾಜು, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಬಿ.ನಟರಾಜ್, ಮುಖಂಡರುಗಳಾದ ಬಲರಾಮೇಗೌಡ,
ಪೂರ್ಣಚಂದ್ರಗೌಡ, ಮಿರ್ಲೆ ನಂದೀಶ್, ಕೊತ್ವಾಲ್ ಮಂಜುನಾಥ್, ವಾಸಿಂ, ಸೌಕತ್, ಹರೀಶ್, ಶಂಕರೇಗೌಡ, ತಂದ್ರೆಧರ್ಮ, ಗುಣಪಾಲ್ ಜೈನ್, ಸಂತೋಷ, ವಾಸಿಂ, ಲೋಕೇಶ್, ತಂದ್ರೆಕೊಪ್ಪಲು ಮಂಜುನಾಥ್, ಮಹದೇವ್, ಚಂದ್ರಹಾಸ, ಬಿಳಿಯಪ್ಪ, ಜನಾರ್ಧನ್, ರಾಜಯ್ಯ, ಜವರಯ್ಯ, ರಂಗಪ್ಪ, ಕಾಂತರಾಜು, ರಂಗೇಗೌಡ, ಮೂರ್ತಿ, ವೀರಭದ್ರ, ಜನಾರ್ಧನ್, ರವಿ ಸೇರಿದಂತೆ ಹಲವರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading