ಚಳ್ಳಕೆರೆ:ತಾಲ್ಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ 20 ಲಕ್ಷ ವೆಚ್ಚದಲ್ಲಿ ಶ್ರೀ ಮಾರಮ್ಮ ದೇವಿ ಹಾಗೂ ಪೀರಲ ದೇವರ ದೇವಾಲಯಗಳ ಕಾಮಗಾರಿಯ ಭೂಮಿ ಪೂಜಾ ಕಾರ್ಯಕ್ರಮವನ್ನು ಶಾಸಕ ಟಿ ರಘುಮೂರ್ತಿ ಹಾಗೂ ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ನೆರವೇರಿಸಿದರು.
ಈ ವೇಳೆ ಮಾತಾಡಿದ ಶಾಸಕ ಟಿ ರಘುಮೂರ್ತಿ ಎಲ್ಲಾ ಜನಾಂಗದ ಧಾರ್ಮಿಕ ಭಾವನೆಗಳಿಗೆ ಸರ್ಕಾರ ಮನ್ನಣೆ ನೀಡಿದ್ದು ಹಿಂದೂ ಹಾಗೂ ಮುಸ್ಲಿಮರು ಭಾವೈಕ್ಯತೆಯಿಂದ ಸಹಬಾಳ್ವೆ ನಡೆಸಬೇಕು ಎಂದು ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಕೆ ಎಸ್ ನವೀನ್ ಮಾತನಾಡಿ ದೇವಾಲಯಗಳು ಶಾಂತಿ ಸಹಬಾಳ್ವೆಯ ಸಂಕೇತವಾಗಿದ್ದು ದೇವಾಲಯಗಳ ಕಾಮಗಾರಿಗಳು ಯಾವುದೇ ವಿಜ್ಞಗಳು ಬಾರದೆ ಸುಸೂತ್ರವಾಗಿ ನಡೆದು ಭಕ್ತರ ಕೋರಿಕೆಗಳನ್ನು ಈಡೇರಿಸುವಂತಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಿದ್ದೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ನಗರಸಭೆ ಸದಸ್ಯರಾದ ರಮೇಶ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಯ್ಯ, ತಾಲ್ಲೂಕು ಗ್ಯಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖಂಡರುಗಳಾದ ಕಳ್ಳಿ ನಿಂಗಯ್ಯ, ಬೋರಯ್ಯ, ಶ್ರೀನಿವಾಸ್, ತಿಪ್ಪೇಸ್ವಾಮಿ, ಸುಮಲತಾ, ದೊಡ್ಡರಂಗಪ, ಜಗದೀಶ್ ನಾಯ್ಕ, ಕೃಷ್ಣ ನಾಯ್ಕ, ತಿಪ್ಪೇಸ್ವಾಮಿ, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.