ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ | ಮಹಿಳಾ ದಿನಾಚರಣೆ ಅಂಗವಾಗಿ ಲೇಖಕಿಯರ ಸಂಘದಿಂದ ವಿಶೇಷ ಕಾರ್ಯಕ್ರಮ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಕರ್ನಾಟಕ ಲೇಖಕಿಯರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಕರ್ತರ ಭವನದ ಅಂಬೇಡ್ಕರ್ ಸಭಾಂಗಣದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.



ಕಾರ್ಯಕ್ರಮವನ್ನು ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಜೆ. ಕರಿಯಪ್ಪ ಮಾಳಗಿ ಉದ್ಘಾಟಿಸಿದರು. ಮಹಿಳೆಯರು ಇಂದಿನ ಕಾಲದಲ್ಲಿ ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿದ್ದು, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಬಹುತ್ವ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುತ್ತವೆ ಎಂದು ಅವರು ಹೇಳಿದರು.
ಖ್ಯಾತ ವಿಮರ್ಶಕಿ ಹಾಗೂ ಕವಯತ್ರಿ ತಾರಿಣಿ ಶುಭದಾಯಿನಿ ಅವರು ಉಪನ್ಯಾಸ ನೀಡುತ್ತಾ, ಅನಾದಿ ಕಾಲದಿಂದ ಮಹಿಳೆಯರು ಶೋಷಣೆಯನ್ನು ಅನುಭವಿಸುತ್ತಾ ಬಂದಿದ್ದರೂ ತಮ್ಮ ಸೃಜನಶೀಲತೆಯ ಮೂಲಕ ಸಮಾಜದಲ್ಲಿ ತಮ್ಮ ಸ್ಥಾನವನ್ನು ನಿರ್ಮಿಸಿಕೊಂಡಿದ್ದಾರೆ ಎಂದು ಹೇಳಿದರು.
ಕವಿಗೋಷ್ಠಿ ಅಧ್ಯಕ್ಷತೆ ವಹಿಸಿದ್ದ ಕವಿ ಹಾಗೂ ಚಿತ್ರಕಲಾವಿದ ಜಭಿವುಲ್ಲಾ ಎಂ. ಅಸದ್ ಮಾತನಾಡಿ, ಕವಿಯಿಂದ ಕವಿತೆ ಗುರುತಿಸಿಕೊಳ್ಳುವುದಲ್ಲ, ಕವಿತೆಯಿಂದ ಕವಿ ಗುರುತಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ನಿರ್ಮಲ ಮರಡಿಹಳ್ಳಿ, ಉಪಾಧ್ಯಕ್ಷೆ ಶಬ್ರಿನಾ ಮಹಮದ್ ಅಲಿ ಸೇರಿದಂತೆ ಹಲವು ಪದಾಧಿಕಾರಿಗಳು ಭಾಗವಹಿಸಿದ್ದರು. ರಾಜ್ಯದ ನಾನಾ ಭಾಗಗಳಿಂದ ಬಂದ 63 ಕವಯತ್ರಿಯರು ತಮ್ಮ ಕವಿತೆಗಳನ್ನು ವಾಚಿಸಿ ಕಾರ್ಯಕ್ರಮಕ್ಕೆ ವಿಶೇಷ ಕಳೆ ತಂದರು.
About The Author
Discover more from JANADHWANI NEWS
Subscribe to get the latest posts sent to your email.