March 17, 2026


ಚಿತ್ರದುರ್ಗಮೇ.16:
ಕೈಮಗ್ಗ ಮತ್ತು ಜವಳಿ ಇಲಾಖೆಯು ರೇಷ್ಮೆ, ಹತ್ತಿ ಮತ್ತು ಉಣ್ಣೆ ಕೈಮಗ್ಗ ಉತ್ಪಾದನೆಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕøಷ್ಠತೆಯ ಉತ್ಪನ್ನ ತಯಾರಿಸಿದ ಕೈಮಗ್ಗ ನೇಕಾರರಿಗೆ 2025-26ನೇ ಸಾಲಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
ಅರ್ಹರು ಕೈಮಗ್ಗ ಉತ್ಪಾದನೆಗಳ ಅಭಿವೃದ್ಧಿಗಾಗಿಕೈಮಗ್ಗ ನೇಯ್ಗೆಯ ಅಸಾಧಾರಣ ಕೌಶಲ್ಯದಲ್ಲಿ ಸುಮಾರು ಕನಿಷ್ಟ 30 ವರ್ಷ ಮೇಲ್ಪಟ್ಟವರು ಮತ್ತು ಕನಿಷ್ಟ 10 ವರ್ಷಗಳ ಅನುಭವ ಹೊಂದಿರಬೇಕು. ಆಸಕ್ತರು ಸೀರೆ, ಉಣ್ಣೆ ಕಂಬಳಿ ಉತ್ಪನ್ನದ ಮಾದರಿ ಬಣ್ಣದ ಛಾಯಾಚಿತ್ರ ಹಾಗೂ ವಿವಿಧ ಹಂತದ ವಿಡಿಯೋದೊಂದಿಗೆ ಅರ್ಜಿಯನ್ನು ಇದೇ ಮೇ.30ರೊಳಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಚಿತ್ರದುರ್ಗ ಇವರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-221426 ಗೆ ಕಚೇರಿಯ ವೇಳೆಯಲ್ಲಿ ನೇರವಾಗಿ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading