May 16, 2026
FB_IMG_1778938052903.jpg

ಹಿರಿಯೂರು :
ವಿದ್ಯಾರ್ಥಿಗಳು ರೀಲ್ಸ್ ಮತ್ತು ಫೋನುಗಳ ಗೀಳಿಗೆ ಒಳಗಾಗದೆ ತಮ್ಮ ಜೀವನದ ಗುರಿಗಳ ಕಡೆಗೆ ಹೆಚ್ಚು ಒತ್ತು ಕೊಟ್ಟು, ಸಮಾಜಮುಖಿಯಾಗಿ ಬದುಕಬೇಕು, ಇತ್ತೀಚೆಗೆ ಬಡ ಕುಟುಂಬದ ಅನೇಕ ಮಕ್ಕಳು ಎತ್ತರದ ಹುದ್ದೆಗಳಿಗೆ ಏರಿರುವುದು ಎಲ್ಲರಿಗೂ ಸ್ಫೂರ್ತಿಯಾಗಲಿ ಎಂಬುದಾಗಿ ನಗರಸಭೆ ಪೌರಾಯುಕ್ತರಾದ ಎ.ವಾಸೀಂ ಹೇಳಿದರು.ನಗರದ ಹುಳಿಯಾರ್ ರಸ್ತೆಯಲ್ಲಿರುವ ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಿವೃತ್ತ ಪ್ರಾಂಶುಪಾಲರಾದ ಎಂ.ಜಿ.ರಂಗಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು, ಶಿಕ್ಷಣ ಪಡೆಯುವ ಸಮಯದಲ್ಲಿಯೇ ವೈಜ್ಞಾನಿಕ ಚಿಂತನೆಗಳ ಅಳವಡಿಸಿಕೊಂಡಲ್ಲಿ ಭವಿಷ್ಯದ ಬದುಕು ಉತ್ತಮವಾಗಿರುತ್ತದೆ, ಆಧುನಿಕ ತಂತ್ರಜ್ಞಾನವನ್ನು ಶಿಕ್ಷಣದ ಜೊತೆಜೊತೆಗೆ ಅಳವಡಿಸಿಕೊಳ್ಳಬೇಕು ಎಂಬುದಾಗಿ ಹೇಳಿದರು.
ಸಮಾರಂಭದ ಆರಂಭಕ್ಕೂ ಮೊದಲು ಇತ್ತೀಚೆಗೆ ನಿಧನರಾದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಗೌರವ ಸಮರ್ಪಿಸಿ ಕಾಲೇಜಿನ ಅಭಿವೃದ್ಧಿಗೆ ಅವರು ನೀಡಿದ ಮಹತ್ವದ ಕೊಡುಗೆಗಳ ಬಗ್ಗೆ ಸ್ಮರಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಿ.ಆರ್.ಹನುಮಂತರಾಯ ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯ ಶಾಂತರಾಜ್, ಸರ್ಕಾರಿ ಪಿಯು ಕಾಲೇಜು ಮಾರುತಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಸಮಿತಿ ಸಂಚಾಲಕಿ ಪ್ರೊಫೆಸರ್ ಆರ್.ಪುಷ್ಪಲತಾ, ಯೂತ್ ರೆಡ್ ಕ್ರಾಸ್ ಘಟಕದ ಸಂಚಾಲಕ ಎಂ.ಜಿ.ಧನಂಜಯ್ ಎಂ ಎಸ್ ಎಸ್ ಘಟಕದ ಸಂಚಾಲಕ ಎಂ.ಬಿ.ಗಟ್ಟಿ, ದೈಹಿಕ ಶಿಕ್ಷಣ ವಿಭಾಗದ ಸಂಚಾಲಕ ಅಣ್ಣಪ್ಪಸ್ವಾಮಿ, ರೇಂಜರ್ಸ್ ಘಟಕದ ಸಂಚಾಲಕಿ ಪ್ರೊಫೆಸರ್ ಡಿ.ಚೈತ್ರ, ರೋವರ್ಸ್ ಘಟಕದ ಸಂಚಾಲಕ ಪ್ರೊಫೆಸರ್ ರಾಹುಲ್ ಲಂಬಾಣಿ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಪ್ರೊಫೆಸರ್ ಎಲ್.ನಾಗರಾಜು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading