ಹಿರಿಯೂರು :
ನಗರದ ಹುಳಿಯಾರು ರಸ್ತೆ ಹರಿಶ್ಚಂದ್ರ ಘಾಟ್ ಬಡಾವಣೆಯ ಪ್ರಧಾನ ರಸ್ತೆಯಲ್ಲಿರುವ ಶ್ರೀಶನೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀಶನೇಶ್ವರ ಜಯಂತ್ಯೊತ್ಸವ ಅಂಗವಾಗಿ ದೇವಸ್ಥಾನದ ವತಿಯಿಂದ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ.
ಇದರ ಅಂಗವಾಗಿ ಶ್ರೀಶನೇಶ್ವರ ದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನಡೆಸಲಾಯಿತು, ಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ, ಮಹಾ ಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಹಾಗೂ ಉಪಹಾರ ವಿತರಣೆ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಶ್ರೀಶನೇಶ್ವರ ಜಯಂತಿ ಪ್ರಯುಕ್ತ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ, ಎಲ್ಲಾ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಶ್ರೀಶನೇಶ್ವರ ಸ್ವಾಮಿಯ ಕೃಪಾಶೀರ್ವಾದಕ್ಕೆ ಪಾತ್ರರಾದರು.
About The Author
Discover more from JANADHWANI NEWS
Subscribe to get the latest posts sent to your email.