June 16, 2026
FB_IMG_1781624392109.jpg

ಚಿತ್ರದುರ್ಗಜೂನ್16:
ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಇಂಜಿನಿಯರ್ ಹೆಚ್. ರವಿಶಂಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆ ವಲಯಕ್ಕೆ ವರ್ಗಾವಣೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ವಿಜಯಪುರದ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ಕಾಲುವೆ ವಲಯ ಸಂ-2 ರಾಂಪುರದಲ್ಲಿ ಮುಖ್ಯ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಹೆಚ್. ರವಿಶಂಕರ್ ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆ ವಲಯದ ಖಾಲಿ ಇರುವ ಮುಖ್ಯ ಅಭಿಯಂತರರ ಹುದ್ದೆಗೆ ವರ್ಗಾಯಿಸಲಾಗಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading