
ಹೊಳಲ್ಕೆರೆ ಆಗಸ್ಟ್16:
ಹೊಳಲ್ಕೆರೆ ಪುರಸಭೆ ವ್ಯಾಪ್ತಿಯಲ್ಲಿ ಪಿಓಪಿ ಮತ್ತು ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಂಘ ಸಂಸ್ಥೆಗಳು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡಲು ನಗರ ಸಭೆ, ಪೊಲೀಸ್, ಅಗ್ನಿ ಶಾಮಕ ಸೇರಿದಂತೆ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಪ್ರತಿಷ್ಠಾಪನೆ ಸ್ಥಳಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‍ನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರತಿನಿತ್ಯ ಉತ್ಪನ್ನವಾಗುವ ತ್ಯಾಜ್ಯವನ್ನು ಪುರಸಭೆ ಕಸ ಸಂಗ್ರಹ ವಾಹನಕ್ಕೆ ನೀಡಬೇಕು. ಗಣೇಶ ವಿಸರ್ಜನೆಗೆ ತಾಲ್ಲೂಕು ಪಂಚಾಯಿತಿ ಹಿಂಭಾಗದಲ್ಲಿರುವ ಎನ್.ಇ.ಎಸ್. ಕಾಲೋನಿಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಪಿ.ಓ.ಪಿ, ರಾಸಾಯನಿಕ ಬಣ್ಣಗಳ ವಿಗ್ರಹ ಮಾರಾಟ ಹಾಗೂ ನಿಗದಿತ ಸ್ಥಳ ಹೊರತು ಪಡಿಸಿ ಗಣೇಶ ವಿರ್ಸಜನೆ ಮಾಡುವುದು ಕಂಡುಬಂದರೆ ದಂಡ ವಿಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪರಿಸರ ಸ್ನೇಹಿ, ಬಣ್ಣ ರಹಿತ, ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸುವಂತೆ ಹೊಳಲ್ಕೆರೆ ಪುರಸಭೆ ಪ್ರಕಟಣೆ ತಿಳಿಸಿದೆ.
About The Author
Discover more from JANADHWANI NEWS
Subscribe to get the latest posts sent to your email.