
ಚಳ್ಳಕೆರೆ: ವಿದ್ಯಾರ್ಥಿಗಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢಗೊಳ್ಳಲು ಕ್ರೀಡೆ ಸಹಕಾರಿಯಾಗಲಿದ್ದು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳುವ ಮೂಲಕ ತಮ್ಮ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಶಿಲ್ಪ ತಿಳಿಸಿದರು.





ನಗರದ ಡಿ ಸುಧಾಕರ್ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಸ್ ಆರ್ ಎಸ್ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ ಕ್ರೀಡಾಪಟುಗಳು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಕ್ರೀಡೆಯಲ್ಲಿ ತಂಡಗಳ ಗೆಲುವು ಮುಖ್ಯವಲ್ಲ ಕ್ರೀಡೆ ಗೆಲ್ಲುವುದು ಮುಖ್ಯ ಈ ನಿಟ್ಟಿನಲ್ಲಿ ಸ್ಪರ್ಧಾರ್ಥಿಗಳು ಉತ್ತಮ ರೀತಿಯಲ್ಲಿ ಕ್ರೀಡೆಗಳನ್ನು ಆಡಿ ಯಶಸ್ಸು ಸಾಧಿಸಬೇಕು ಎಂದು ಕರೆ ನೀಡಿದರು.
ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಕೆ. ತಿಮ್ಮಯ್ಯ ಮಾತನಾಡಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಇಲ್ಲದೆ ಕ್ರೀಡೆಗಳಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತಿಲ್ಲ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಕ್ರೀಡೆಗಳಲ್ಲಿ ಭಾಗವಹಿಸಿದರೆ ದೈಹಿಕವಾಗಿ ರೋಗಗಳಿಂದ ದೂರವಿರಬಹುದು ಎಲ್ಲ ವಿದ್ಯಾರ್ಥಿಗಳು ಕೇವಲ ಓದಿನಲ್ಲಿ ಮುಂದೆ ಬರಲು ಸಾಧ್ಯವಿಲ್ಲ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಯನ್ನು ಸಂಪಾದಿಸಬಹುದು ಕ್ರೀಡಾಪಟುಗಳಿಗೆ ಸರ್ಕಾರ ಶೇಕಡ ಮೂರರಷ್ಟು ಮೀಸಲಾತಿಯನ್ನು ಕ್ರೀಡ ವಿಭಾಗದಲ್ಲಿ ಮೀಸಲು ಕಲ್ಪಿಸುವುದರಿಂದ ಉನ್ನತ ವ್ಯಾಸಂಗ ಹಾಗೂ ಹುದ್ದೆಗಳನ್ನು ಪಡೆಯಲು ಸಹಾಯಕವಾಗಿದೆ ಪೋಷಕರು ತಮ್ಮ ಮಕ್ಕಳಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆ ಎಂಬುದನ್ನು ತಿಳಿದುಕೊಂಡು ಆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು ಪ್ರೋತ್ಸಾಹ ನೀಡಬೇಕು ತಾಲೂಕು ಮಟ್ಟದ ಕ್ರೀಡೆಗಳಲ್ಲಿ ಕ್ರೀಡಾಪಟುಗಳು ಕ್ರೀಡಾ ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಲ್ಲಿ ಅಂತಹ ಕ್ರೀಡೆಗಳನ್ನು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಆಡಲು ನಿರಾಕರಿಸಲಾಗುವುದು ಈಗಾಗಲೇ ಹಲವು ತಾಲೂಕುಗಳಲ್ಲಿ ಇಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಸ್ಪೂರ್ತಿ ಮೆರೆಯಬೇಕು ಎಂದು ತಿಳಿಸಿದರು.
ಪ್ರಾಂಶುಪಾಲರ ಸಂಘದ ಅಧ್ಯಕ್ಷ ನಾಗೇಶ್ ಮಾತನಾಡಿ ಕ್ರೀಡೆಗಳು ಒಬ್ಬ ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡುತ್ತದೆ ಕೇವಲ ಓದಿನಲ್ಲಿ ಮುಂದುವರೆದರೆ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ ತಮ್ಮಲ್ಲಿರುವ ಕ್ರೀಡ ಆಸಕ್ತಿಯನ್ನು ಹೊರ ಚೆಲ್ಲಿದರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ ನಗರ ಸಭೆ ಉಪಾಧ್ಯಕ್ಷೆ ಕವಿತಾ ಅಶ್ವಥ್ ರೆಡ್ಡಿ ಎಂ ಕೆ ದೇವಪ್ಪ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.