
ಚಿತ್ರದುರ್ಗ. ನ.16:
ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗದಲ್ಲಿ ದುರಸ್ಥಿ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ನ.16 ರಿಂದ 19 ರವರೆಗೆ ಸ್ಥಗಿತಗೊಳಿಸಲಾಗುತ್ತಿದೆ.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.