ಐಎಎಸ್ ಮೇಡಂ ಅವರಿಗೆ ಮನವಿ ಸಲ್ಲಿಕೆ
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಸ್ವಂತ ಪತ್ರಿಕಾ ಭವನ ನಿರ್ಮಿಸಿಕೊಳ್ಳಲು ಸರ್ಕಾರಿ ಖಾಲಿ ನಿವೇಶನವನ್ನು ಗುರುತಿಸಿ ಮಂಜೂರು ಮಾಡುವಂತೆ ಕೋರಿ ಚಿತ್ರದುರ್ಗ ಜಿಲ್ಲಾಧಿಕಾರಿಗಳಾದ ರಮ್ಯಾ ಐಎಎಸ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ರಾಜ್ಯದಲ್ಲಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಸಚಿವರಾದ ಡಿ. ಸುಧಾಕರ್ ಅವರ ಸಹಕಾರದೊಂದಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾದ ವಿನಾಯಕ್ ತೊಡರನಾಳ್ ಅವರ ನೇತೃತ್ವದಲ್ಲಿ ಪತ್ರಕರ್ತರ ಸಂಘದ ಭವನ ನಿರ್ಮಾಣದ ಉದ್ದೇಶಕ್ಕಾಗಿ ವಿಶೇಷವಾಗಿ ₹50 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆಯಾಗಿತ್ತು.
ಈ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರುವ ಅನುದಾನದ ಸದ್ಬಳಕೆಗೆ ಪೂರಕವಾಗಿ ಹಿರಿಯೂರು ಪಟ್ಟಣದಲ್ಲಿ ಸರ್ಕಾರಿ ಖಾಲಿ ನಿವೇಶನವನ್ನು ಗುರುತಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಮಂಜೂರು ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಹಿರಿಯೂರು ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಸಭೆ, ಸಮಾರಂಭ, ಪತ್ರಿಕಾ ಚಟುವಟಿಕೆಗಳು ಹಾಗೂ ಸಂಘಟನಾತ್ಮಕ ಕಾರ್ಯಕ್ರಮಗಳನ್ನು ನಡೆಸಲು ಸ್ವಂತ ಭವನದ ಅಗತ್ಯವಿದೆ. ಪತ್ರಕರ್ತರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಾಣವಾದರೆ ಪತ್ರಕರ್ತರ ಸಂಘಟನೆಯ ಚಟುವಟಿಕೆಗಳಿಗೆ ಅನುಕೂಲವಾಗುವುದರ ಜೊತೆಗೆ ಪತ್ರಕರ್ತರಿಗೆ ಶಾಶ್ವತ ವೇದಿಕೆ ಕಲ್ಪಿಸಿದಂತಾಗುತ್ತದೆ.
ಆದ್ದರಿಂದ ಜಿಲ್ಲಾಡಳಿತ ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಸರ್ಕಾರಿ ನಿವೇಶನವನ್ನು ಗುರುತಿಸಿ ಸಂಘಕ್ಕೆ ಮಂಜೂರು ಮಾಡುವ ಮೂಲಕ ಪತ್ರಕರ್ತರ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚಿತ್ರದುರ್ಗ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಪೊಲೀಸ್ ಬೇಟೆ ಪ್ರಸನ್ನ ಹಾಗೂ ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಗಿರಿಧರ್ ಹಿರಿಯ ಪತ್ರಕರ್ತರಾದ ಬಿದರಕೆರೆ ರಮೇಶ್ ಪ್ರಕಾಶ್ ಬಬ್ಬೂರು ಖಂಡೇನಹಳ್ಳಿ ಬಸವರಾಜ್ ಹರ್ತಿಕೋಟೆ ರಾಜಣ್ಣ ಶಿವಕುಮಾರ್ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.
