ದೊಡ್ಡ ಘಟ್ಟದಲ್ಲಿ ಕ್ಷೀರ ಸಂಜೀವಿನಿ ಯೋಜನೆಯಡಿ ಚೆಕ್ ವಿತರಣೆ

ಹಿರಿಯೂರು ತಾಲೂಕು ದೊಡ್ಡ ಘಟ್ಟ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಕ್ಷೀರ ಸಂಜೀವಿನಿ ಯೋಜನೆಯಡಿ ಹಾಲು ಒಕ್ಕೂಟದಿಂದ ಸಂಘದ ಸದಸ್ಯರಿಗೆ ಚೆಕ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿಮುಲ್ ನಿರ್ದೇಶಕರಾದ ಸನ್ಮಾನ್ಯ ಬಿ.ಸಿ. ಸಂಜೀವ್ ಮೂರ್ತಿ ಅವರು ಲಕ್ಕವನಹಳ್ಳಿ ಬಿ.ಎಂ.ಸಿ ಕೇಂದ್ರಕ್ಕೆ ಭೇಟಿ ನೀಡಿ ಹಾಲು ಸಂಗ್ರಹ, ಗುಣಮಟ್ಟ ಪರಿಶೀಲನೆ ಹಾಗೂ ಕೇಂದ್ರದ ಕಾರ್ಯವೈಖರಿಯನ್ನು ವೀಕ್ಷಿಸಿದರು. ಹಾಲು ಉತ್ಪಾದಕರ ಶ್ರಮ ಮತ್ತು ಮಹಿಳಾ ಸಹಕಾರ ಸಂಘಗಳ ಪಾತ್ರವನ್ನು ಅವರು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಹಾಲು ಉತ್ಪಾದಕರು ಉಪಸ್ಥಿತರಿದ್ದು, ಕ್ಷೀರ ಸಂಜೀವಿನಿ ಯೋಜನೆಯಿಂದ ಹಾಲು ಉತ್ಪಾದಕರಿಗೆ ಆರ್ಥಿಕ ನೆರವು ದೊರೆಯುತ್ತಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.

About The Author
Discover more from JANADHWANI NEWS
Subscribe to get the latest posts sent to your email.