ವರದಿ: ಕೆ.ಟಿ.ಮೋಹನ್ ಕುಮಾರ್
ಸಾಲಿಗ್ರಾಮ (ಮೈಸೂರು ಜಿಲ್ಲೆ): ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಕೆ.ಮಧುಚಂದ್ರ ಹೇಳಿದರು.
ಅವರು ಪಟ್ಟಣದ ಸಾಧನ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಸಂಸ್ಥೆಯ ಮೂರನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಹಣ, ಆಸ್ತಿ ಮಾಡುವುದಕ್ಕಿಂತ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿದರೆ ಅದೇ ನಿಮ್ಮ ದೊಡ್ಡ ಆಸ್ತಿಯಾಗಿರುತ್ತದೆ ಎಂದರು.
ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿ ನಮ್ಮ ಮಕ್ಕಳಿಗೆ ಶಿಕ್ಷಕರೇ ಎಲ್ಲವನ್ನು ಕಲಿಸುತ್ತಾರೆ ಎಂಬ ಮನಸ್ಥಿತಿಯಿಂದ ಹೊರಬಂದು ತಮ್ಮ ಮಕ್ಕಳ ಬಗ್ಗೆ ಸದಾ ಜಾಗರೂಕರಾಗಿರಬೇಕು. ಶಾಲೆಯಷ್ಟೇ ಮನೆಯಲ್ಲಿಯೂ ಕೂಡ ಪೋಷಕರುಗಳು ತಮ್ಮ ಮಕ್ಕಳ ಕಲಿಕೆ ಬಗ್ಗೆ ಎಚ್ಚರ ವಹಿಸಬೇಕು ಜೊತೆಗೆ ಅವರೊಡನೆ ಸೇರುವಂತಹ ಕೆಲಸವನ್ನು ಮಾಡಬೇಕು ಎಂದರು.
ಪೋಷಕರು ಶಾಲೆಗಳಿಗೆ ಆಗಿಂದಾಗೆ ಭೇಟಿ ನೀಡಿ ತಮ್ಮ ಮಕ್ಕಳ ಕಲಿಕೆ ಹಾಗೂ ನಡವಳಿಕೆಗಳ ಬಗ್ಗೆ ಮಾಹಿತಿ ಪಡೆದು ಮಕ್ಕಳು ಉತ್ತಮ ಹಾದಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕು ಎಂದರು. ಸಾಧನ ಸಂಸ್ಥೆಯು ಸದಾ ಕ್ರಿಯಾಶೀಲ ಚಟುವಟಿಕೆಗಳನ್ನು ನಡೆಸಿಕೊಂಡು ಬರುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರವಾಗಿದೆ ಎಂದರು.
ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಮಾತನಾಡಿ ಶಾಲಾ ವಾರ್ಷಿಕೋತ್ಸವಗಳು ಕೇವಲ ಉತ್ಸವಗಳಾಗದೆ ಪ್ರತಿಭಾವಂತರಿಗೆ ವೇದಿಕೆಯನ್ನು ಕಲ್ಪಿಸುವುದು, ವಿವಿಧ ಕ್ಷೇತ್ರಗಳ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದರ ಜೊತೆಗೆ ಪ್ರೋತ್ಸಾಹಿಸುವಂತಹ ಕಾರ್ಯಗಳಾಗಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಪೋಷಕರುಗಳಲ್ಲಿ ತಮ್ಮ ಮಕ್ಕಳು ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಬೇಕು, ಓದಬೇಕು ಎಂಬ ಭಾವನೆ ಅತಿ ಹೆಚ್ಚಾಗಿದೆ. ಪೋಷಕರ ಈ ಭಾವನೆಯನ್ನೇ ಗುರಿಯಾಗಿಟ್ಟುಕೊಂಡು ಕೆಲವು ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ ಜೊತೆಗೆ ಪೈಪೋಟಿಯು ಕೂಡ ನಡೆಯುತ್ತಿರುವುದನ್ನು ನಾವು ಕಾಣಬಹುದಾಗಿದೆ. ಇಂತಹ ಪ್ರಸ್ತುತ ದಿನಗಳಲ್ಲಿ ವಿದ್ಯಾಸಂಸ್ಥೆಗಳು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಆ ಕ್ಷೇತ್ರದಲ್ಲಿ ಅವರು ಸಾಧನೆಗೈಯಲು ಪ್ರೋತ್ಸಾಹಿಸುವಂತಹ ಕೆಲಸವನ್ನು ಮಾಡಬೇಕು ಆ ದಾರಿಯಲ್ಲಿ ಪೋಷಕರು, ಶಿಕ್ಷಕರುಗಳು, ಶಿಕ್ಷಣ ಸಂಸ್ಥೆಗಳು ಸಾಗಬೇಕು ಎಂದರು.
ವಿದ್ಯಾರ್ಥಿಗಳಿಂದ ವಿವಿಧ ಗೀತ ಗಾಯನ, ನೃತ್ಯ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲಾಯಿತು.
ವಿವಿಧ ಕ್ಷೇತ್ರಗಳ ಸಾಧಕರುಗಳನ್ನು ಸನ್ಮಾನಿಸಿ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಾಧನ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಸಂಸ್ಥೆಯ ಅಧ್ಯಕ್ಷ ಎಂ.ಯು.ಪುನೀತ್ ಕುಮಾರ್, ಉಪಾಧ್ಯಕ್ಷ ಅಮಿತ್ ಕುಮಾರ್, ಕಾರ್ಯದರ್ಶಿ ಆರ್.ಸೋಮಶೇಖರ್, ಖಜಾಂಚಿ ಹರೀಶ್ ಕುಮಾರ್, ನಿರ್ದೇಶಕ ಭರತ್ ಜೈನ್, ಮುಖಂಡರುಗಳಾದ ಅಮರ್ ಜಿತ್ ಜೈನ್, ಸವಿತ, ಜ್ಯೋತಿಜಯಸೇನಾ, ಶ್ರೀಕೃಪಾ, ಸುನೀತಾ, ಸುನೀಲ್, ಮುಖ್ಯ ಶಿಕ್ಷಕಿ ಯಶಸ್ವಿನಿ, ಶಿಕ್ಷಕರಾದ ಮಹೇಶ್, ಜಗದೀಶ್, ಶಾಂತರಾಜ್, ಲೀಲಾವತಿ, ರಂಜಿತ, ಮೀನಾಕ್ಷಿ, ನೈದಿಲೆ, ಅನುಷಾ, ಉಷಾ, ಬಾಲು, ಪತ್ರಕರ್ತರಾದ ಎಸ್.ಬಿ.ಹರೀಶ್, ಸಿ.ಸಿ.ಮಹದೇವ್,
ಎಸ್.ಬಿ.ಬಸವರಾಜು, ಕೆ.ಸಿ.ಮಹದೇವ್ ಸೇರಿದಂತೆ ಹಲವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.