ಬೆಂಗಳೂರು, ಫೆ. 17: ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ (ರಿ) ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಶ್ರೀಮತಿ ಶೈಲಾ ಕೆ ಡಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಇಂದು ನಡೆದ ರಾಜ್ಯ ಪರಿಷತ್ ಕಾರ್ಯಕಾರಿಣಿ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು, ಸಭೆಯ ಅಧ್ಯಕ್ಷತೆಯನ್ನು ಹಿರಿಯ ಉಪಾಧ್ಯಕ್ಷರಾದ ಶ್ರೀ ಜಿ. ನೀಲಕಂಠ ಸ್ವಾಮಿ ವಹಿಸಿದ್ದರು. ನಂತರ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದರು.
ಈ ಸಂದರ್ಭದಲ್ಲಿ ನೂತನ ರಾಜ್ಯಾಧ್ಯಕ್ಷರಾದ ಶ್ರೀಮತಿ ಶೈಲಾ ಕೆ ಡಿ ಅವರನ್ನು ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.
ನಂತರ ಮಾತನಾಡಿದ ಶೈಲಾ ಕೆ ಡಿ ಅವರು, ಮುನಿಸಿಪಲ್ ನೌಕರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಹಂತ ಹಂತವಾಗಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.