March 17, 2026
IMG-20260317-WA0151.jpg

ಚಿತ್ರದುರ್ಗ: ಸ್ಥಳೀಯ ಉದ್ಯೋಗಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ ನಗರದ ಮಹಾತ್ಮ ಫುಲೆ ಅಧ್ಯಯನ ಕೇಂದ್ರದಲ್ಲಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಕೇಂದ್ರದ ರಾಮಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
IBPS, RRB, SSC ಸೇರಿದಂತೆ ವಿವಿಧ ಕೇಂದ್ರ ಮಟ್ಟದ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಿ ಗುಣಮಟ್ಟದ ಮಾರ್ಗದರ್ಶನ ಒದಗಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ, ಈಗಾಗಲೇ ಕೇಂದ್ರದ ವತಿಯಿಂದ KPSC ಮತ್ತು KEA ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಹಾಗೂ ರಿಯಾಯಿತಿ ದರದಲ್ಲಿ ತರಬೇತಿ ನೀಡಲಾಗುತ್ತಿದ್ದು, ಹಲವು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ ಎಂದರು.
ಚಿತ್ರದುರ್ಗದಲ್ಲಿ ಇದೇ ಮೊದಲ ಬಾರಿಗೆ ಬ್ಯಾಂಕಿಂಗ್ ಪರೀಕ್ಷೆಗಳಿಗಾಗಿ ಇಂತಹ ಉಚಿತ ತರಬೇತಿ ಆರಂಭವಾಗುತ್ತಿರುವುದು ವಿಶೇಷವಾಗಿದೆ. ಆಸಕ್ತ ಅಭ್ಯರ್ಥಿಗಳು ತಕ್ಷಣವೇ ನೋಂದಣಿ ಮಾಡಿಕೊಳ್ಳುವಂತೆ ಮನವಿ ಮಾಡಲಾಗಿದೆ.
ವಿಳಾಸ: ಮಹಾತ್ಮ ಫುಲೆ ಅಧ್ಯಯನ ಕೇಂದ್ರ, #13, ಮೊದಲನೇ ಮುಖ್ಯ ರಸ್ತೆ, ಸರಸ್ವತಿಪುರಂ, ಚಿತ್ರದುರ್ಗ – 577501.
ಸಂಪರ್ಕ: 9242843504, 9740108588, 9972445430.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading