ನಾಯಕನಹಟ್ಟಿ : ಸರಕಾರದ ನಿಯಮನುಸಾರ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಕ್ರಮವಹಿಸಬೇಕು ಎಂದು ಡಿ ವೈ ಎಸ್ ಪಿ ಸತ್ಯನಾರಾಯಣರಾವ್ ತಿಳಿಸಿದರು.

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿಪಾಲನಾ ಸಭೆಯಲ್ಲಿ ಮಾತನಾಡಿದ ಅವರು, ಜೂ.25 ರಂದು ನಡೆಯಲಿರುವ ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಸಮಾಜದವರು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ಹಬ್ಬದಂದು ಪ್ರಾಣಿ ಹಿಂಸೆ ಮಾಡಬಾರದು. ಶಾಂತಿ, ಸೌಹಾರ್ದದ ಸಂಕೇತ ಹಬ್ಬವಾದ ಬಕ್ರೀದ್ ಹಬ್ಬಕ್ಕೆ ಎಲ್ಲರೂ ಒಗ್ಗೂಡಿ ಶ್ರಮಿಸಬೇಕು. ಅರ್ಥಪೂರ್ಣವಾಗಿ ಆಚರಿಸುವ ಹಬ್ಬದಂದು ಧಾರ್ಮಿಕ ಕಾರ್ಯಕ್ರಮಗಳಿಗೆ ದಕ್ಕೆಯಾಗದಂತೆ ಪ್ರಾರ್ಥನ ಮೆರವಣಿಗೆ ನಡೆಸಬೇಕು ಎಂದು ಹೇಳಿದರು.
ಹೋಬಳಿ ವ್ಯಾಪ್ತಿಯಲ್ಲಿ ಅಸ್ಪೃಶ್ಯತೆ ಆಚರಣೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಪರಿಶಿಷ್ಟರು ಕಾನೂನುಗಳನ್ನು ದುರುಪಯೋಗ ಪಡಿಸಿಕೊಳ್ಳದೆ ಅನ್ಯಾಯದ ವಿರುದ್ಧ ಹೋರಾಟ ನಡೆಸಲು ಬಳಸಿಕೊಳ್ಳಬೇಕು ಎಂದು ಸೂಚಿಸಿದರು.
ಶಿಕ್ಷಣದಿಂದ ಮಾತ್ರ ಸಾಮಾಜಿಕ ಮುನ್ನೆಲೆಗೆ ಬರಲು ಸಾಧ್ಯವಿದೆ. ಸಮುದಾಯದವರು ಶಿಕ್ಷಣಕ್ಕೆ ಒತ್ತು ನೀಡಿ ಮಕ್ಕಳಿಗೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಮಾರ್ಗದರ್ಶನ ನೀಡಬೇಕು ಎಂದರು.
ನಂತರ ತಳಕು ಪೊಲೀಸ್ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ ಶಿರೇಹಳ್ಳಿ ಮಾತನಾಡಿ ಕಳೆದ ಮೂರು ನಾಲ್ಕು ತಿಂಗಳಲ್ಲಿ ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಾಹನದ ದಾಖಲೆಗಳು, ಇನ್ಸೂರೆನ್ಸ್, ಚಾಲನಾ ಪರವಾನಿಗೆ ಹೊಂದಿರಬೇಕು. ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಎಂದು ಸಲಹೆ ನೀಡಿದರು.
ಬಾಲ್ಯ ವಿವಾಹಗಳು ಹೆಚ್ಚಾಗಿ ನಡೆಯುತ್ತಿದ್ದು ಅವುಗಳನ್ನು ತಡೆಯುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ. ಸೈಬರ್ ಅಪರಾಧಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು ಅವುಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು. ಹನುಮಾನು ಪದ ವ್ಯಕ್ತಿಗಳು ಕಂಡು ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಕ್ರಿಕೆಟ್ ಬೆಟ್ಟಿಂಗ್ ಹಾವಳಿ ಹೆಚ್ಚಾಗಿದ್ದು ಅದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ. ಇತ್ತೀಚಿನ ದಿನಗಳಲ್ಲಿ ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ಅಕ್ರಮ ಇಸ್ಪೇಟ್ ಜೂಜಾಟದ ಕೇಸುಗಳು, 10 ಅಕ್ರಮ ಮಧ್ಯ ಮಾರಾಟದ ಕೇಸುಗಳು, 14 ಮದ್ಯಪಾನ ಮಾಡಿ ವಾಹನ ಚಲಾಯಿಸಿರುವ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸುತ್ತಮುತ್ತಲ ಗ್ರಾಮಗಳ ಮುಖಂಡರುಗಳು ಹಾಗೂ ಪಟ್ಟಣದ ಮುಖಂಡರುಗಳು, ಪೊಲೀಸ್ ಸಿಬ್ಬಂದಿ ವರ್ಗದವರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.