ಚಿತ್ರದುರ್ಗ ಜೂ.17:
ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಲ್ಲಿ ಜೂನ್.21 ರಂದು ರಾಷ್ಟಿçÃಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ -2026 ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಗೆ ಸೂಕ್ತ ಪೊಲೀಸ್ ಭದ್ರತೆ ಕಲ್ಪಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ನೀಟ್ ಮರು ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರೀಕ್ಷೆ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿ ಹಾಗೂ ಸಿಬ್ಬಂದಿ, ಸಮನ್ವಯತೆಯಿಂದ ಕೆಲಸ ಮಾಡುವ ಮೂಲಕ ಪರೀಕ್ಷೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಈ ಬಾರಿಯ ನೀಟ್ ಪರೀಕ್ಷೆಯು ಜೂನ್ 21 ರ ಭಾನುವಾರದಂದು ಮಧ್ಯಾಹ್ನ 2:00 ಗಂಟೆಯಿAದ ಸಂಜೆ 5:15 ರವರೆಗೆ ನಡೆಯಲಿದೆ. ಕಳೆದ ಬಾರಿಗಿಂತ ಈ ಬಾರಿ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ 15 ನಿಮಿಷಗಳ ಕಾಲಾವಕಾಶವನ್ನು ನೀಡಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಒಂದು ಗಂಟೆ ಹೆಚ್ಚುವರಿ ಸಮಯಾವಕಾಶ ಇರಲಿದೆ.
ನೀಟ್ ಮರು ಪರೀಕ್ಷೆ ದೇಶದಾದ್ಯಂತ ತೀವ್ರ ಕುತೂಹಲ ಮತ್ತು ಸೂಕ್ಷ್ಮತೆಯನ್ನು ಪಡೆದುಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲವಾಗದAತೆ ನಿರಾಳವಾಗಿ ಪರೀಕ್ಷೆ ಬರೆಯಲು ಪೂರಕ ವಾತಾವರಣ ನಿರ್ಮಿಸಬೇಕು. ಯಾವುದೇ ಸಣ್ಣ ಲೋಪಕ್ಕೂ ಅವಕಾಶ ನೀಡದಂತೆ ಅಧಿಕಾರಿಗಳು ಹೆಚ್ಚು ಜಾಗರೂಕರಾಗಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಬಿ.ಎನ್.ಎಸ್ ಕಲಂ 163 ಅಡಿ ನಿಷೇಧಾಜ್ಞೆ ಜಾರಿಗೊಳಿಸಬೇಕು. ಆರೋಗ್ಯ ಇಲಾಖೆಯ ವೈದ್ಯಕೀಯ ಸಿಬ್ಬಂದಿ ನಿಯೋಜಿಸಬೇಕು. ಪರೀಖ್ಷಾ ಕೇಂದ್ರಗಳ ಮುಖ್ಯಸ್ಥರು ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಕಲ್ಪಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.
6 ಪರೀಕ್ಷಾ ಕೇಂದ್ರ 3086 ವಿದ್ಯಾರ್ಥಿಗಳು ಹಾಜರು:
ನೀಟ್ ಪರೀಕ್ಷೆ ನೋಡಲ್ ಅಧಿಕಾರಿ ನಾಗಭೂಷಣ್ ಮಾತನಾಡಿ, ಚಿತ್ರದುರ್ಗ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು, ಚಳ್ಳಕೆರೆಯ ಹೆಚ್.ಪಿ.ಪಿಸಿ. ಡಿಗ್ರಿ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್ ಮರು ಪರೀಕ್ಷೆ ನಡೆಯಲಿದೆ. ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3086 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು ಮಧ್ಯಾಹ್ನ 2:00 ರಿಂದ ಸಂಜೆ 5:15 ರವರೆಗೆ ನಡೆಯಲಿದೆ. ರಾಷ್ಟಿçÃಯ ಪರೀಕ್ಷಾ ಸಂಸ್ಥೆಯ ಕಡೆಯಿಂದ ಮೆಟಲ್ ಡಿಡೆಕ್ಟರ್ ಅಳವಡಿಸಲಾಗುತ್ತದೆ. ಬಾಲಕ ಹಾಗೂ ಬಾಲಕಿಯರಿಗೆ ಪ್ರತ್ಯೇಕವಾಗಿ ಪ್ರಿಸ್ಕಿಂಗ್ ನಡೆಸಲಾಗುವುದು. ಬಯೋಮೆಟ್ರಿಕ್ ದೃಢೀಕರಣದ ನಂತರವೇ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಪ್ರಶ್ನೆ ಪತ್ರಿಕೆ ಹಾಗೂ ಓಎಂಆರ್ ಶೀಟ್‌ಗಳು ನಗರದ ರಾಷ್ಟಿçÃಕೃತ ಬ್ಯಾಂಕ್‌ಗೆ ಆಮಿಸುತ್ತವೆ. ಇಲ್ಲಿಂದ ಪರೀಕ್ಷೆಯ ದಿನದಂದು ಜಿಲ್ಲಾಡಳಿತದ ಮಾರ್ಗಾಧಿಕಾರಿಗಳು ಸರ್ಕಾರಿ ವಾಹನದಲ್ಲಿ ಪೊಲೀಸ್ ಬೆಂಗಾವಲಿನಲ್ಲಿ ಪತ್ರಿಕೆಗಳನ್ನು ಕೇಂದ್ರಗಳಿಗೆ ತಲುಪಿಸಲಿದ್ದಾರೆ. ಪರೀಕ್ಷೆ ಮುಗಿದ ನಂತರ ಓ.ಎಂ.ಆರ್ ಶೀಟ್‌ಗಳನ್ನು ಅಂಚೆ ಮೂಲಕ ಕಳುಹಿಸಿಕೊಡಲಾಗಿದೆ. ಪರೀಕ್ಷೆಯ ಸುಗಮ ನಿರ್ವಹಣೆಗಾಗಿ ಈಗಾಗಲೇ ಜಿಲ್ಲಾಡಳಿತದ ವತಿಯಿಂದ ವೀಕ್ಷಕರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರೊಂದಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ವತಿಯಿಂದಲೂ ಪ್ರತ್ಯೇಕ ವೀಕ್ಷಕರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಜಿ.ಪಂ.ಉಪಕಾರ್ಯದರ್ಶಿ ಎಂ.ಬಾಬು, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಾಶಿ, ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಹೆಚ್.ದಿವಾಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.