September 17, 2025
IMG-20241117-WA0155.jpg

 

ಚಳ್ಳಕೆರೆ: ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗಲು ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ರವರು ಪಂಚವಾರ್ಷಿಕ ಯೋಜನೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದರಿಂದ ಸಹಕಾರಿ ಕ್ಷೇತ್ರವು ವಿಸ್ತಾರವಾಗಿ ಬೆಳೆದು ರೈತರ ನೆರವಿಗೆ ಧಾವಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.

ನಗರದ ಕಂಬಳಿ ಮಾರುಕಟ್ಟೆ ಸಭಾಂಗಣದಲ್ಲಿ ನಡೆದ 71ನೆ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಹಕಾರ ಕ್ಷೇತ್ರವು ಸಮುದ್ರದಂತೆ ವ್ಯಾಪಿಸಿದ್ದು ಅದರ ಆಳ ಅಗಲ ಬಹು ವಿಸ್ತಾರವಾಗಿದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲಾ ವಲಯಗಳಿಗೂ ಸಮಾನ ಅವಕಾಶ ದೊರೆಯುತ್ತಿದ್ದು ರೈತರು ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಸಹಕಾರಿ ಕ್ಷೇತ್ರಗಳ ಉದ್ಯಮಗಳಲ್ಲಿ ಹಲವು ಬದಲಾವಣೆಗಳು ಕಂಡಿದ್ದು ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳು ಒದಗಿಸುತ್ತಿರುವ ಎಲ್ಲಾ ಸೇವೆಗಳನ್ನು ಒದಗಿಸುವ ಮಟ್ಟಕ್ಕೆ ಬೆಳೆದಿರುವುದು ಸ್ವಾಗತಾರ್ಹವಾಗಿದ್ದು ರೈತರು ಇಂತಹ ಸಹಕಾರಿ ವಲಯಗಳನ್ನು ಬಳಸಿಕೊಂಡು ತಮ್ಮ ಜೀವನವನ್ನು ಉತ್ತಮಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಚಿತ್ರದುರ್ಗ ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕರಾದ ಮಾತೃಶ್ರೀ ಮಂಜುನಾಥ್ ಮಾತನಾಡಿ ದೇಶದ ಸಹಕಾರ ಚಳುವಳಿ ಆರಂಭವಾಗಿ 120 ವರ್ಷಗಳು ಕಳೆದಿದ್ದು ಸಹಕಾರ ಚಳುವಳಿಯ ಆರೋಗ್ಯಕರ ಬೆಳವಣಿಗೆಗೆ ಹಲವಾರು ನಾಯಕರು ಶ್ರಮಿಸಿದ್ದಾರೆ. ಈ ಬಾರಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯುತ್ತಿದ್ದು ಸಪ್ತಾಹದ ದ್ಯೇಯದಂತೆ ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬುದಾಗಿದ್ದು 2047ರ ಭಾರತ ಸ್ವಾತಂತ್ರ್ಯ ಶತಮಾನೋತ್ಸವದ ವೇಳೆಗೆ ದೇಶದ ಆರ್ಥಿಕತೆ 30 ಟ್ರಿಲಿಯನ್ ಗುರಿಯನ್ನು ಇರಿಸಿಕೊಳ್ಳಲಾಗಿದ್ದು 2025ರ ವೇಳೆಗೆ ದೇಶದ ಆರ್ಥಿಕತೆ ಐದು ಟ್ರಿಲಿಯನ್ ತಲುಪುವ ನಿರೀಕ್ಷೆ ಇದೆ ಭಾರತ ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಸಾಲಿನಲ್ಲಿ ಮುನ್ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆಗೆ ಸಹಕಾರ ಕ್ಷೇತ್ರದ ಅತ್ಯಮೂಲ್ಯ ಕೊಡುಗೆಯು ಇದೆ ಎಂದು ತಿಳಿಸಿದರು.

ಈ ವೇಳೆ ಸಹಕಾರಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿವಿಧ ಸಂಸ್ಥೆಗಳಿಗೆ ಸನ್ಮಾನಿಸಲಾಯಿತು

ಈ ಸಂದರ್ಭದಲ್ಲಿ ಸಹಕಾರ ಸಂಘದ ನಿರ್ದೇಶಕರುಗಳಾದ ಜಗದೀಶ್, ಜಗನ್ನಾಥ, ಮಲ್ಲಿಕಾರ್ಜುನ್, ಮಾತೃ ಶ್ರೀ ಮಂಜುನಾಥ್, ಸಿ.ವಿರೇಂದ್ರ ಬಾಬು, ನಿಜಲಿಂಗಪ್ಪ, ಪರಸಪ್ಪ, ಬಸವರಾಜ್, ಹಿರಿಯ ಸಹಕಾರಿ ಧುರೀಣ ಆದಿ ಭಾಸ್ಕರ ಶ್ರೇಷ್ಟೀ ತಾಲ್ಲೂಕು ಗ್ರಾರೆಂಟಿ ಸಮಿತಿಯ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭೆ ನಾಮ ನಿರ್ದೇಶನ ಸದಸ್ಯರಾದ ಬಡಗಿ ಪಾಪಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading