March 17, 2026
IMG-20251117-WA0087.jpg

ವರದಿ: ಕೆ.ಟಿ. ಓಬಳೇಶ್ ನಲಗೇತನಹಟ್ಟಿ.

ನಾಯಕನಹಟ್ಟಿ:-ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ನಾಯಕನಹಟ್ಟಿ ಪಿಎಸ್ ಐ ಪಾಂಡುರಂಗಪ್ಪ ಹೇಳಿದರು.

ನಾಯಕನಹಟ್ಟಿ ಪಟ್ಟಣದಲ್ಲಿ ಸೋಮವಾರದಂದು ಹೆಲ್ಮೆಟ್ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಕುರಿತು ನಡೆದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಅಪಘಾತಗಳ ಪೈಕಿ ದ್ವಿಚಕ್ರ ವಾಹನಗಳ ಅಪಘಾತವೇ ಹೆಚ್ಚು. ಅದರಲ್ಲಿ ಹೆಲ್ಮೆಟ್ ಧರಿಸದೆ ಸಾವನಪ್ಪಿರುವರ ಸಂಖ್ಯೆ ಅಧಿಕ.ಹೆಲ್ಮೆಟ್ ಹಾಕದೆ ತಲೆಗೆ ಪೆಟ್ಟಾಗಿ ಸಾವನ್ನಪ್ಪಿರುವವರು ಹೆಚ್ಚಾಗಿದ್ದಾರೆ. ಇದಕ್ಕೆ ಹೆಲ್ಮೆಟ್ ಧರಿಸದಿರುವುದೇ ಮುಖ್ಯ ಕಾರಣ. ನಿಮ್ಮ ಮನೆಯವರು ಹಾಗೂ ನಿಮ್ಮನ್ನು ನಂಬಿದವರಿಗಾಗಿ ಹೆಲ್ಮೆಟ್ ಅನ್ನು ಕಡ್ಡಾಯವಾಗಿ ಧರಿಸಲೇಬೇಕು.

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡುವ ಜೊತೆಗೆ ಬೈಕ್ ಗಳನ್ನು ಸುರಕ್ಷಿತವಾಗಿ ಓಡಿಸಬೇಕು.ರಸ್ತೆಯ ಮೇಲೆ ವಾಹನಗಳನ್ನು ಓಡಿಸುವ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪ್ರತಿಯೊಬ್ಬರು 18 ವರ್ಷದ ನಂತರ ವಾಹನ ಚಾಲನೆ ಪರವಾನಿಗಿ ಪಡೆದು ವಾಹನಗಳನ್ನು ಚಾಲನೆ ಮಾಡಬೇಕು. ಅಪ್ರಾಪ್ತ ಮಕ್ಕಳು ವಾಹನ ಚಾಲನೆ ಮಾಡಿದರೆ, ವಾಹನದ ಮಾಲೀಕರು ದಂಡ ಕಟ್ಟಬೇಕಾಗುತ್ತದೆ. ಹೀಗಾಗಿ ತಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಬೇಡಿ, ಅಲ್ಲದೇ ಈ ಸಂದರ್ಭದಲ್ಲಿ ಅಪಘಾತವಾದರೆ, ಯಾವುದೇ ರೀತಿ ಪರಿಹಾರ ದೊರೆಯುವುದಿಲ್ಲ. ಅಪಘಾತಕ್ಕೀಡಾದ ವ್ಯಕ್ತಿ ಸಾವಿಗೀಡಾದರೆ, ಗಾಯಗೊಂಡರೆ ಮಾಲಿಕನೇ ಪರಿಹಾರ ನೀಡಬೇಕಾಗುತ್ತದೆ ಎಂದರು. ಯಾವುದೇ ಕಾರಣಕ್ಕೂ ಮಧ್ಯಪಾನ ಸೇವಿಸಿ ವಾಹನ ಚಲಾಯಿಸಿದ್ದಲ್ಲಿ ದುಬಾರಿ ಬೆಲೆಯಲ್ಲಿ ದಂಡ ಕಟ್ಟಬೇಕಾಗುತ್ತದೆ ಎಂದು ವಾಹನ ಸವಾರರಿಗೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಾಯಕನಹಟ್ಟಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ರಾಘವೇಂದ್ರ, ಅಣ್ಣಪ್ಪ ನಾಯ್ಕ, ಭಾಷಾ, ವೀರೇಶ್ ಶಿವಣ್ಣ, ಹಾಲೇಶ್, ರಮೇಶ್, ದೇವರಾಜ್ ಕೋಟೆ, ಕುಮಾರ್, ಮಹೇಶ್, ಅಜಯ್, ಸೇರಿದಂತೆ ಪಟ್ಟಣದ ಗ್ರಾಮಸ್ಥರು ಹಾಗೂ ವಿವಿಧ ಹಳ್ಳಿಗಳ ಗ್ರಾಮಸ್ಥರು ಇದ್ದರು

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading