ವರದಿ: ಕೆ.ಟಿ. ಓಬಳೇಶ್ ನಲಗೇತನಹಟ್ಟಿ.
ನಾಯಕನಹಟ್ಟಿ:: ಪುಣ್ಯಕ್ಷೇತ್ರದಲ್ಲಿ ಉಚಿತ ತಪಾಸಣೆ ಶಿಬಿರ ನಡೆಸುವುದು ನಮ್ಮ ಪುಣ್ಯ ಎಂದು ಡಾ. ಬಸವರಾಜಪ್ಪ ಹೇಳಿದರು.



ಸೋಮವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರಮಠದ ಆವರಣದಲ್ಲಿ ಬಾಪೂಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಮಲ್ಟ್ರಿ ಸ್ಪೆಷಾಲಿಟಿ ಆಸ್ಪತ್ರೆ ಚಳ್ಳಕೆರೆ ಹಾಗೂ ಆಯುಷ್ ಇಲಾಖೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು ಈ ಪುಣ್ಯಕ್ಷೇತ್ರದಲ್ಲಿ ಬಹಳ ವರ್ಷಗಳಿಂದ ಉಚಿತ ತಪಾಸಣೆ ಶಿಬಿರ ನಡೆಸಲಾಗುತ್ತದೆ ಆದ್ದರಿಂದ ಪಟ್ಟಣ ಹಾಗೂ ಹೋಬಳಿಯ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ನಿರಂತರವಾಗಿ ಉಚಿತ ತಪಾಸಣೆ ಶಿಬಿರ ಮತ್ತು ಮಕ್ಕಳಿಗೋಸ್ಕರ ಸ್ವರ್ಣ ಬಿಂದು ಕಾರ್ಯಕ್ರಮ ನಡೆಸಲಾಗುತ್ತದೆ ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಇದರ ಅನುಕೂಲವನ್ನು ಪಡೆದುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಕಿವಿಮಾತು ಹೇಳಿದರು

.
ನಾಯಕನಹಟ್ಟಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಆರ್ ಶ್ರೀಕಾಂತ್ ಮಾತನಾಡಿದರು ಪಟ್ಟಣದಲ್ಲಿ ಬಾಪೂಜಿ ಆಯುರ್ವೇದಿಕ್ ಕಾಲೇಜ್ ವತಿಯಿಂದ ಉಚಿತ ತಪಾಸಣೆ ನಡೆಸುವುದು ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಬಡ ಜನರಿಗೆ ತುಂಬಾ ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮಗಳು ಈ ಭಾಗದಲ್ಲಿ ಇನ್ನು ಹೆಚ್ಚಿನದಾಗಿ ನಡೆಯಬೇಕು ಕಾಲೇಜಿನ ವ್ಯವಸ್ಥಾಪಕರಿಗೆ ಹಾಗೂ ಸಿಬ್ಬಂದಿಗಳಿಗೆ ಕೃತಜ್ಞತೆ ತಿಳಿಸಿದರು.
ಈ ಸಂದರ್ಭದಲ್ಲಿ ವೈದ್ಯರಾದ ಮದುರು ಕಲ್ಯಾಣಿ, ಸುಪ್ರಿಯಾ, ವೈಷ್ಣವಿ ,ಶಿವಪ್ರಸಾದ್, ಸಂತೋಷ ರೆಡ್ಡಿ, ಪೂಜಾ, ಅರುಣ,ಅರುಣ, ಗುರುಭಗವತಿ, ವೀರಭದ್ರಗೌಡ ಸೇರಿದಂತೆ ಸಿಬ್ಬಂದಿಗಳು ರೋಗಿಗಳು ಸಾರ್ವಜನಿಕರು ಇದ್ದರು
About The Author
Discover more from JANADHWANI NEWS
Subscribe to get the latest posts sent to your email.