ವರದಿ: ಕೆ.ಟಿ.ಮೋಹನ್ ಕುಮಾರ್
ಮೈಸೂರು: ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಶ್ರದ್ಧೆಯಿಂದ ಕಲಿಯುವ ಮೂಲಕ ಉನ್ನತ ಸ್ಥಾನಮಾನಗಳನ್ನು ಅಲಂಕರಿಸಬೇಕು ಎಂದು ಬೆಂಗಳೂರಿನ ಕೈಗಾರಿಕೋದ್ಯಮಿ
ಎಮ್.ಎಸ್.ಲೋಕೇಶ್ ಹೇಳಿದರು.
ಅವರು ನಗರದ ಸರಸ್ವತಿಪುರಂನಲ್ಲಿರುವ ಉಪ್ಪಾರ ವಿದ್ಯಾರ್ಥಿನಿಲಯದ ಅನ್ನದಾಸೋಹಕ್ಕೆ ಎರಡು ಲಕ್ಷ ರೂಗಳ ದೇಣಿಗೆಯನ್ನು ನೀಡಿ ಮಾತನಾಡಿದರು.
ನಗರ ಪ್ರದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ಯಾವುದೇ ರೀತಿಯ ತೊಂದರೆ ಆಗಬಾರದೆಂದು ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಲಾಗಿದೆ. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಲು ಈ ವಿದ್ಯಾರ್ಥಿನಿಲಯ ಬಹಳ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದೆ. ಇಂತಹ ಪವಿತ್ರ ಸ್ಥಳದಲ್ಲಿ ಇದ್ದುಕೊಂಡು ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಶ್ರದ್ಧೆ, ಭಕ್ತಿಯಿಂದ ಕಲಿಕೆಯನ್ನು ಮಾಡುವ ಮೂಲಕ ಅತ್ಯುನ್ನತ ಶ್ರೇಣಿಗಳಲ್ಲಿ ಉತ್ತೀರ್ಣರಾಗಿ ಉನ್ನತ ಅಧಿಕಾರಿಗಳಾಗಬೇಕು. ಆ ಮೂಲಕ ವಿದ್ಯಾರ್ಥಿ ನಿಲಯಕ್ಕೆ, ಹೆತ್ತವರಿಗೆ, ಕಲಿಸಿದ ಗುರುಗಳಿಗೆ ಹಾಗೂ ಹುಟ್ಟಿದ ಊರಿಗೆ ಕೀರ್ತಿಯನ್ನು ತರಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಹೆಚ್.ಜೆ.ಗೀತಾಲೋಕೇಶ್, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಪರ ಆಯುಕ್ತ ಡಿ.ಜಗನ್ನಾಥ್ ಸಾಗರ್, ವಿದ್ಯಾರ್ಥಿಗಳು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.