January 29, 2026
FB_IMG_1737201760368.jpg


ಹಿರಿಯೂರು :
ಭದ್ರಾ ಜಲಾಶಯದಿಂದ ನಮ್ಮ ಪಾಲಿನ ನೀರು ಪಡೆಯಲು ಯಾರ ಅಪ್ಪಣೆಯು ಬೇಕಿಲ್ಲ 20 ವರ್ಷಗಳ ಹಿಂದೆಯೇ ನೀರು ಹಂಚಿಕೆಯಾಗಿದ್ದು ಭಾರತೀಯ ರೈತ ಒಕ್ಕೂಟ ಈ ವಿಚಾರದಲ್ಲಿ ಪದೇಪದೇ ಖ್ಯಾತೆ ತೆಗೆಯುವುದು ಬೇಡ ಎಂಬುದಾಗಿ ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಲಹೆ ಮಾಡಿದೆ.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರದಂದು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ ಸಮಿತಿ ಪದಾಧಿಕಾರಿಗಳು ರಾಜಕೀಯ ಹೇಳಿಕೆಗಳ ನೀಡಿ ರೈತರ ಭಾವನಾತ್ಮಕವಾಗಿ ಪ್ರಚೋದಿಸುವ ಕೆಲಸ ಯಾರು ಮಾಡಬಾರದು ಎಂಬುದಾಗಿ ಸಮಿತಿ ವಿನಂತಿಸಿದೆ.
ಭದ್ರಾ ಮತ್ತು ತುಂಗಾ ನದಿಯಲ್ಲಿ ಬಯಲುಸೀಮೆ ಪ್ರದೇಶಗಳಿಗೆ 20 ಪಾಯಿಂಟ್ 9 ಟಿಎಂಸಿ ನೀರು ಹಂಚಿಕೆಯಾಗಿ ಎರಡು ದಶಕಗಳು ಕಳೆದಿವೆ 17.4 ಟಿಎಂಸಿ ತುಂಗಾ ನದಿ ಹಾಗೂ 12.5 ಟಿಎಂಸಿ ಅಷ್ಟು ಭದ್ರಾ ನದಿಯಲ್ಲಿ ಪಾಲು ನೀಡಲಾಗಿದೆ ಭದ್ರಾ ಮೇಲ್ದಂಡೆ ಕಾಮಗಾರಿ ಶೇಕಡ 50ರಷ್ಟು ಪೂರ್ಣಗೊಂಡಿದೆ ಇಂತಹ ಸಂದರ್ಭದಲ್ಲಿ ಖ್ಯಾತೆ ತೆಗೆಯುವುದು ಬಯಲು ಸೀಮೆ ರೈತ ರೈತ ದೃಷ್ಟಿಯಿಂದ ಒಳ್ಳೆಯದಲ್ಲ.
ಭದ್ರಾ ಮೇಲ್ದಂಡೆ ತುಂಗಾದಲ್ಲಿ ಅತಿ ಹೆಚ್ಚು ನೀರಿನ ಪಾಲು ಇದೆ, ಜಗಳೂರಿಗೂ ಯೋಜನೆಯಡಿ ನೀರು ಪೂರೈಕೆಯಾಗುತ್ತಿದ್ದು, ದಾವಣಗೆರೆ ರೈತರು ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಒತ್ತಾಯಿಸಿ, ಚಿತ್ರದುರ್ಗ ಜಿಲ್ಲಾ ರೈತರ ಹೋರಾಟಕ್ಕೆ ಧ್ವನಿಗೂಡಿಸಬೇಕೇ ವಿನಃ ಅಪಸ್ವರ ಎತ್ತಬಾರದು ಎಂದರು.
ಭದ್ರಾ ಮೇಲ್ದಂಡೆ ಯೋಜನೆ ಅಡಿ ಲಭ್ಯವಾಗುವ ನೀರನ್ನು ಕೆರೆ ತುಂಬಿಸಲು ಹಾಗೂ ಮೈಕ್ರೋ ಇರಿಗೇಶನ್ ಮೂಲಕ ರೈತರ ಜಮೀನುಗಳಿಗೆ ಹರಿಸಲಾಗುತ್ತಿದೆ, ಮೈಕ್ರೋ ಇರಿಗೇಷನ್ ಗೆ 21.90 ಟಿಎಂಸಿ, 367 ಕೆರೆ ತುಂಬಿಸಲು 6 ಟಿಎಂಸಿ ವಾಣಿವಿಲಾಸ ಸಾಗರಕ್ಕೆ ಎರಡು ಟಿಎಂಸಿ ನೀರು ಮೀಸಲಿಡಲಾಗಿದೆ.ಯೋಜನೆಯಡಿ ನಾವೇನು ಭತ್ತ ಬೆಳೆಯಲು ಜಮೀನುಗಳಲ್ಲಿ ಮನಸ್ಸೋ ಇಚ್ಛೆ ನೀರು ನಿಲುಗಡೆ ಮಾಡಿಕೊಳ್ಳುತ್ತಿಲ್ಲ ಬದಲಾಗಿ ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲ ಮಟ್ಟ ಹೆಚ್ಚಳ ಮಾಡಿಕೊಳ್ಳುತ್ತಿದ್ದೇವೆ.
ವಾಣಿವಿಲಾಸ ಸಾಗರ ಜಲಾಶಯದಿಂದ ಈಗಾಗಲೇ ಹೊಳಲ್ಕೆರೆ, ಚಿತ್ರದುರ್ಗ ಹಿರಿಯೂರು, ಚಳ್ಳಕೆರೆ, ತಾಲೂಕಿನ ಸೈನ್ಸ್ ಸಿಟಿಗೂ ನೀರು ಒಯ್ಯಲಾಗಿದೆ, ನೀರು ರಾಷ್ಟ್ರೀಯ ಆಸ್ತಿ ಎಂಬುದನ್ನು ದಾವಣಗೆರೆ ಮಂದಿ ಅರಿಯುವುದು ಒಳಿತು ಎಂಬುದಾಗಿ ಸಲಹೆ ನೀಡಿದರು.
ಭದ್ರಾ ಮೇಲ್ದಂಡೆಯಡಿ ಜಗಳೂರು ತಾಲೂಕಿಗೂ ನೀರುಣಿಸಲಾಗುತ್ತಿದೆ, ಜಗಳೂರು ದಾವಣಗೆರೆ ಜಿಲ್ಲೆಯಲ್ಲಿದೆ ಎಂಬ ಸಂಗತಿ ಅಲ್ಲಿನ ಹೋರಾಟಗಾರರಿಗೆ ಅರಿವಿದ್ದರೆ ಓಳಿತು. ಜಗಳೂರು ತಾಲೂಕಿನ ಕಾಮಗಾರಿ ಇದುವರೆಗೂ ಆರಂಭವಾಗಿಲ್ಲ ಈ ಬಗ್ಗೆ ಭಾರತೀಯ ರೈತ ಒಕ್ಕೂಟದ ಪದಾಧಿಕಾರಿಗಳು ಹೋರಾಟ ನಡೆಸಿ ನಮ್ಮ ಜಿಲ್ಲೆಯ ಬರಡು ಪ್ರದೇಶವಾದ ಜಗಳೂರು ತಾಲೂಕಿಗೆ ನ್ಯಾಯ ಸಲ್ಲಿಸಬೇಕಾಗಿದೆ.
ಈ ವಿಚಾರದಲ್ಲಿ ದುರ್ಗದ ಹೋರಾಟಗಾರರ ಜೊತೆ ಧ್ವನಿಗೂಡಿಸಲು ಭಾರತೀಯ ರೈತ ಒಕ್ಕೂಟದ ಪದಾಧಿಕಾರಿಗಳು ಚಿತ್ರದುರ್ಗ ಜಿಲ್ಲೆ ರೈತರು ಕೂಡ ಭದ್ರ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೆ ಬರಲಿದ್ದಾರೆ ಎಂಬ ವಾಸ್ತವ ಅರಿಯಲಿ, ಈ ಬಗ್ಗೆ ಒಕ್ಕೂಟದ ಪದಾಧಿಕಾರಿಗಳಿಗೆ ಅವರವರ ಮನೆ ದೇವರು ಸನ್ಮಾರ್ಗ ದಯಪಾಲಿಸಲಿ ಎಂದು ಸಮಿತಿ ಪ್ರಾರ್ಥಿಸಿದೆ.
ಈ ಸುದ್ದಿಗೋಷ್ಠಿಯಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಯಾದವರೆಡ್ಡಿ, ಕೆ.ಸಿ.ಹೊರಕೇರಪ್ಪ, ಹಂಪಯ್ಯನ ಮಾಳಿಗೆ ಧನಂಜಯ, ಆರ್ ವಿ ನಿಜಲಿಂಗಪ್ಪ ಕಬ್ಬಿಗೆರೆ ನಾಗರಾಜ ಸಮಿತಿ ಪ್ರಧಾನ ಕಾರ್ಯದರ್ಶಿಕೆ ಆರ್.ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಮುಖಂಡರಾದ ಮಲ್ಲಾಪುರತಿಪ್ಪೇಸ್ವಾಮಿ, ಚಿಕ್ಕಪ್ಪನಹಳ್ಳಿರುದ್ರಸ್ವಾಮಿ, ಚಂದ್ರಶೇಖರ್ ನಾಯಕ ಬಾಗೇನಹಳ್ಳಿ ಕೊಟ್ರಬಸಪ್ಪ, ಹುಳಿಯಾರು ಸಿದ್ದಪ್ಪ ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading