March 20, 2026
IMG-20260118-WA0084.jpg

ಹೊಸದುರ್ಗ:
ಹೊಸದುರ್ಗ ತಾಲ್ಲೂಕಿನ ಜಾಣಕಲ್ ಗ್ರಾಮದ ಶ್ರೀ ಶಾರದಾ ಇಂಟರ್‌ನ್ಯಾಷನಲ್ ಶಾಲಾ ಆವರಣದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶದ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು.
ಗ್ಲೋಬಲ್ ಎಜುಕ್ಯಾಂಪಸ್ ಹಾಗೂ ತಿರುಮಳ ರಂಗನಾಥ ಎಜುಕೇಶನ್ ಟ್ರಸ್ಟ್ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕೃಷಿಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮಾದರಿಯಾಗಿರುವ ರೈತರನ್ನು ಗುರುತಿಸಿ ಗೌರವಿಸಲಾಯಿತು.
ತೆಂಗು, ಅಡಿಕೆ, ರಾಗಿ, ಮೆಕ್ಕೆಜೋಳ ಸೇರಿದಂತೆ ವಿವಿಧ ಸಿರಿಧಾನ್ಯ ಬೆಳೆಗಳು ಹಾಗೂ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಮೂಲಕ ಯಶಸ್ಸು ಸಾಧಿಸಿದ ನೂರಕ್ಕೂ ಹೆಚ್ಚು ರೈತರಿಗೆ ಸನ್ಮಾನ ನೀಡಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಜೊತೆಗೆ ಪೋಷಕರಿಗೆ ಅಗ್ನಿ ರಹಿತ ಅಡುಗೆ ಹಾಗೂ ಅಗ್ನಿ ಸಹಿತ ಅಡುಗೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ಲೋಬಲ್ ಎಜುಕ್ಯಾಂಪಸ್ ಎಂ.ಡಿ. ಸಮೀರ್ ಮೆಹತಾಬ್, ಅಧ್ಯಕ್ಷ ನವೀನ್ ಕುಮಾರ್, ತಿರುಮಳ ರಂಗನಾಥ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಕವಿತಾ ಮಹೇಶ್, ಮುಖಂಡರಾದ ಸುಮಿತ್ರಾ ಹಾಗೂ ರಾಕೇಶ್ ಭಾರದ್ವಾಜ್ ಸೇರಿದಂತೆ ತಾಲ್ಲೂಕಿನ ರೈತ ಮುಖಂಡರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಬೋಧಕೇತರ ಸಿಬ್ಬಂದಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading