February 18, 2026
FB_IMG_1771418134919.jpg

ಮೈಸೂರು. ಮಾದಕ ಜಾಲಕ್ಕೆ ಸಿಸಿಬಿ ಬಲೆ – ಇಬ್ಬರು ಪೆಡ್ಲರ್‌ಗಳು ಬಂಧನ
ಮೈಸೂರು ನಗರದಲ್ಲಿ ಗಾಂಜಾ ಹಾಗೂ ಮಾದಕ ವಸ್ತು ಮಾರಾಟಗಾರರ ವಿರುದ್ಧ ಪೊಲೀಸರು ಸಮರ ಮುಂದುವರೆಸಿದ್ದಾರೆ. ಮೈಸೂರು ನಗರ ಸಿಸಿಬಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಬೆಂಗಳೂರು ಮೂಲದ ಮಾದಕ ವಸ್ತು ಪೂರೈಕೆ ಪೆಡ್ಲರ್‌ಗಳಾದ ಪ್ರಮೋದ್.ಆರ್ (27) ಹಾಗೂ ವಿಕಾಸ್.ಎಂ (23) ಅವರನ್ನು ಬಂಧಿಸಲಾಗಿದೆ.
ಬಂಧಿತರಿಂದ ರೂ. 5.10 ಲಕ್ಷ ಮೌಲ್ಯದ ಎಂ.ಡಿ.ಎಂ.ಎ, ರೂ. 1.25 ಲಕ್ಷ ಮೌಲ್ಯದ ಗಾಂಜಾ ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮೈಸೂರು ನಗರಕ್ಕೆ ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಅಕ್ರಮ ಮಾದಕ ವಸ್ತುಗಳನ್ನು ಪೂರೈಕೆ ಮಾಡುವ ಜಾಲದ ಮೇಲೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಪೆಡ್ಲರ್‌ಗಳ ಚಟುವಟಿಕೆಗಳ ಮೇಲೆ ನಿರಂತರ ಕಣ್ಗಾವಲು ಮುಂದುವರೆದಿದೆ.
ಈ ಕಾರ್ಯಾಚರಣೆ ಸಿಸಿಬಿ ಎ.ಸಿ.ಪಿ. ಮಹಮ್ಮದ್ ಶರೀಫ್ ರಾವುತರ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಶಬ್ಬೀರ್ ಹುಸೇನ್ ಹಾಗೂ ಪಿ.ಎಸ್.ಐ.ಗಳಾದ ಲೇಪಾಕ್ಷ.ಕೆ, ಜೋತ್ಸ್ನಾರಾಜ್, ರೇವಣಸಿದ್ದಪ್ಪಾ ಮತ್ತು ಸಿಬ್ಬಂದಿಗಳಾದ ಮಧುಕುಮಾರ್, ಚೇತನ್, ರಾಜಾಸಾಬ್, ಯಶವಂತಕುಮಾರ್, ಕಿರಣ್ ರಾಥೋಡ್, ಸಂತೋಷ್ ಪವಾರ್, ಹಜರತ್ ಅಲಿ, ಸಮೀರ್, ಮಮತ ಹಾಗೂ ಸಿದ್ದರಾಜು ಅವರ ತಂಡದಿಂದ ಯಶಸ್ವಿಯಾಗಿ ಕೈಗೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ತೊಡಗಿದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವೈಖರಿಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಉಪ ಪೊಲೀಸ್ ಆಯುಕ್ತರು ಶ್ಲಾಘಿಸಿ ಪ್ರಶಂಸಿಸಿದ್ದಾರೆ.
ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಪೂರೈಕೆ, ಮಾರಾಟ, ಸಾಗಾಟ ಹಾಗೂ ಸೇವನೆ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading