ಚಳ್ಳಕೆರೆ ಮಾ.18
ಶಿಸ್ತು-ಸಂಯಮ ಬೆಳೆಸಿಕೊಂಡಲ್ಲಿ ಜಗತ್ತಿನ ಯಾವುದೇ ಮೂಲೆಯಲ್ಲ್ಲಾದರೂ ಜೀವನ ಸಾಗಿಸಬಹುದು ಎಂದು ನಿವೃತ್ತ ಬಿಇಒ ರಾಮಯ್ಯ ಹೇಳಿದರು.
ನಗರದ ಬಿಸಿ ನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ 1998 ನ ಬ್ಯಾಚಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಂದ 2.5 ಲಕ್ಷ ರೂ ವೆದ್ದ ಶುದ್ದ ಕುಡಿಯುವ ನೀರಿನ ಘಟದ ವ್ಯವಸ್ಥೆ ವಿದ್ಯಾರ್ಥಿಗಳು ವಿದ್ಯೆಕಲಿಸಿ ಅಂದಿನ ಶಿಕ್ಷಕರ ಸಮ್ಮುಖದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾನು 1998 ನೇ ಸಾಲಿನಲ್ಲಿ ಮುಖ್ಯ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ ಬಿಇಒ ಬಡ್ತಿ ಪಡೆದು ನಿವೃತ್ತಿ ಹೊಂದಿದ್ದೇನೆ.
ನಗರದಲ್ಲಿ ಎರಡು ಸರ್ಕಾರಿ ಶಾಲೆಗಳಿದ್ದು ಪ್ರತಿಷ್ಠೆಯನ್ನು ಪಡೆದುಕೊಂಡಿದ್ದಾವೆ ಎರಡು ಶಾಲೆಗಳನ್ನು ಕಾಪಾಡಿಕೊಂಡು ಬರುವುದು ಎಲ್ಲರ ಜವಾಬ್ದಾರಿಯಾಗಿದೆ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ಶಿಕ್ಷಣ ಕ್ಷೇತ್ರ ಸಾಕಷ್ಟು ಅನುದಾನವನ್ನು ನೀಡುವ ಮೂಲಕ ಹಳೆ ಕಟ್ಟಡಗಳಿಗೆ ಹೊಸ ಕಾಯಕಲ್ಪ ನೀಡಿದ್ದಾರೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗದಂತೆ ಕಾಪಾಡಿಕೊಳ್ಳಬೇಕು.
ಹಿಂದಿನ ದಿನಗಳಿಂದಲೂ ಶಾಲೆಗೆ ಒಳ್ಳೆಯ ಹೆಸರು ಇದೆ. ವಿದ್ಯಾರ್ಥಿಗಳು ಒಂದೇ ಕುಟುಂಬದ ಸದಸ್ಯರಂತೆ ಓದುತ್ತಿದ್ದಾರೆ. ಕಲಿತ ಶಾಲೆ ಹಾಗೂ ಗುರು ಹಿರಿಯರಿಗೆ ಗೌರವ ಕೊಡಬೇಕು. ಹಳೆ ವಿದ್ಯಾರ್ಥಿಗಳು ಶಾಲೆ ಮೇಲಿನ ಪ್ರೀತಿಯಿಂದ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಬಿಇಒ ಕೆ.ಎಸ್ .ಸುರೇಶ್ ಮಾತನಾಡಿ ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ತಾನು ಕಲಿತ ಶಾಲೆ, ಹಾಗೂ ಬಾಲ್ಯದ ದಿನಗಳನ್ನು ಮರೆಯಲು ಸಾಧ್ಯವೇ ಇಲ್ಲ. ಅದೇ ರೀತಿ ಅವರೆಲ್ಲ ದೊಡ್ಡವರಾಗಿ ಒಂದು ಕೆಲಸಕ್ಕೆ ಹತ್ತಿದಾಗ, ತಾವು ಕಲಿತ ಶಾಲೆಗೆ ಏನಾದರೂ ಕೊಡುಗೆ ನೀಡಿದಾಗ ಮಾತ್ರ ಸರಕಾರಿ ಶಾಲೆಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು. ಅಂದಿನ ಶಿಕ್ಷಕರು ಉಪಸ್ಥಿತರಿದ್ದರು.

About The Author
Discover more from JANADHWANI NEWS
Subscribe to get the latest posts sent to your email.