April 18, 2026
FB_IMG_1776510658805.jpg

ಚಿತ್ರದುರ್ಗ:
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಆಕಾಶ್ ಎಸ್ ಅವರು ಚಿತ್ರದುರ್ಗ ತಾಲ್ಲೂಕಿನ ಮಾದಕರಿಪುರ ಗ್ರಾಮ ಪಂಚಾಯಿತಿಗೆ ಶನಿವಾರ ದಿಢೀರ್ ಭೇಟಿ ನೀಡಿ ವಿವಿಧ ಕಾರ್ಯಗಳನ್ನು ಪರಿಶೀಲಿಸಿದರು.

ಗ್ರಾಮ ಪಂಚಾಯಿತಿ ಕಚೇರಿಯ ಕಡತಗಳನ್ನು ಪರಿಶೀಲಿಸಿದ ಅವರು, ಕಚೇರಿ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಭೇಟಿ ನೀಡಿ ಅದರ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು.

ಕಂದಾಯ ವಸೂಲಾತಿ ವಿಷಯವಾಗಿ ಪಂಚಾಯಿತಿ ಪಿಡಿಒ ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚಿಸಿ ಪ್ರಗತಿ ಕುರಿತು ವಿವರಗಳನ್ನು ಪಡೆದುಕೊಂಡರು. ಕುಡಿಯುವ ನೀರಿನ ಸಮಸ್ಯೆಯ ಕುರಿತು ವಿಚಾರಿಸಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪಿಡಿಒ ಹಾಗೂ ಎಇಇ ಅವರಿಗೆ ಸೂಚಿಸಿದರು.
ಇದೇ ವೇಳೆ ಸ್ವಚ್ಛ ಸಂಕೀರ್ಣಕ್ಕೆ ಭೇಟಿ ನೀಡಿ ಅದರ ನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಎಇಇ, ಪಿಡಿಒ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading