July 20, 2025
d84ac5004ac39827dba2218250127f1d19b6c986a2aa597150068c9de3348449.webp


ಚಿತ್ರದುರ್ಗ ಜು. 18
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಲೋಕಾಯುಕ್ತ ಪೊಲೀಸ್ ನಿರೀಕ್ಷಕರು-01 ಅವರು ಜು. 21 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು. ಪೊಲೀಸ್ ನಿರೀಕ್ಷಕರು-02 ಅವರು ಇದೇ ದಿನದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಅಹವಾಲು ಸ್ವೀಕರಿಸುವರು.
ಜು. 22 ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು. ಇದೇ ದಿನದಂದು ಪೊಲೀಸ್ ಉಪಾಧೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಮೊಳಕಾಲ್ಮೂರು ತಾಲ್ಲೂಕು ಕಚೇರಿಯಲ್ಲಿ, ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ನಿಗದಿತ ನಮೂನೆಯಲ್ಲಿ ಅಹವಾಲು ಅರ್ಜಿ ಸ್ವೀಕರಿಸುವರು.
ಸಾರ್ವಜನಿಕರು ತಮ್ಮ ದೂರು, ಅಹವಾಲುಗಳನ್ನು ನಿಗದಿತ ನಮೂನೆ 01 ಮತ್ತು 02 ರಲ್ಲಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎನ್. ವಾಸುದೇವರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading