September 14, 2025
1755517139269.jpg


ಚಿತ್ರದುರ್ಗ ಆಗಸ್ಟ್.18:
ಪ್ರಧಾನಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನದಡಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್ ಹೇಳಿದರು.
ಈಚೆಗೆ ನಗರದ ಕಾಮನಬಾವಿ ಬಡಾವಣೆಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯ ಜಾಗೃತಿ ಕುರಿತು ಜನಪದ ಕಲಾತಂಡದಿಂದ ಆಯೋಜಿಸಲಾದ ಬೀದಿ ನಾಟಕ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರು ತಾಯಿ ಮತ್ತು ಮಗುವಿನ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಿಕೊಳ್ಳಲು ಹೆಚ್ಚಿನ ಪ್ರಾಧ್ಯಾನತೆ ನೀಡಬೇಕು. ಬಾಣಂತಿ ತಾಯಂದಿರ ಆರೋಗ್ಯ ಕೂಡ ಬಹಳ ಮುಖ್ಯವಾಗಿದೆ. ಹುಟ್ಟಿದ ಮಕ್ಕಳಿಗೆ ತಾಯಿ ಎದೆಹಾಲನ್ನು ಮಾತ್ರ ನೀಡಬೇಕು. ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಅಂಶಗಳೂ ತಾಯಿ ಹಾಗೂ ಶಿಶು ಮರಣ ಕಾರಣವಾಗುತ್ತವೆ. ಆರೋಗ್ಯ ಇಲಾಖೆಯಿಂದ ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದರೂ, ಜಿಲ್ಲೆಯಲ್ಲಿ ಬಾಲ್ಯ ವಿವಾಹ ಸಂಭವಿಸುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ. ಬಾಲ್ಯ ವಿವಾಹ ತಡೆಗೆ ಜನ ಸಮುದಾಯದ ಪಾತ್ರ ಬಹಳ ಮುಖ್ಯವಾದದ್ದು, ಹೆಣ್ಣಿಗೆ 18 ವರ್ಷದ ನಂತರ ಗಂಡಿಗೆ 21 ವರ್ಷದ ನಂತರ ಮದುವೆ ಮಾಡಬೇಕು ಎಂದರು.
ಬೀದಿ ನಾಟಕದ ಮೂಲಕ ತಾಯಿ ಮರಣ ಶಿಶು ಮರಣ ಬಾಲ್ಯ ವಿವಾಹ ತಡೆಗಟ್ಟುವಿಕೆ ಹಾಗೂ ಅನೀಮಿಯ ಮುಕ್ತ ಭಾರತದ ನಿಟ್ಟಿನಲ್ಲಿ ರಕ್ತಹೀನತೆ ತಡೆಗಟ್ಟುವಿಕೆ, ಎದೆ ಹಾಲಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್, ಬುದ್ಧನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಂದ್ರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ, ಐ.ಸಿ.ಎಂ.ಆರ್ ಸಂಯೋಜಕರಾದ ಕರಕಪ್ಪ ಮೇಟಿ, ವೀಣಾ, ಸೇಂಟ್ ಜಾನ್ಸ್, ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಏಕಾಂತಮ್ಮ, ಪಾರ್ವತಿ, ಮಮತಾ, ಕೇಶವ ಬೀದಿ ನಾಟಕ ಕಲಾತಂಡದ ರಾಜಣ್ಣ ಡಿ ಮಲ್ಲೂರಹಳ್ಳಿ, ಏಕಾಂತಪ್ಪ, ಸಿದ್ದೇಶ್ವರಿ, ದೇವಿರಮ್ಮ, ಚನ್ನಬಸಪ್ಪ, ಕೀರ್ತಿರಾಜ್, ಹಂಪಣ್ಣ ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading