September 14, 2025
1755522614879.jpg


ಚಿತ್ರದುರ್ಗಆಗಸ್ಟ್18:
ನೈಸರ್ಗಿಕ ಸಂಪನ್ಮೂಲಗಳ ಮೇಲ್ವಿಚಾರಣೆಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಪಾತ್ರ ಕುರಿತ ಅಧ್ಯಯನಕ್ಕೆ ಗುಜರಾತ್‍ನಿಂದ ಫೌಂಡೇಷನ್ ಫಾರ್ ಇಕೋಲಾಜಿಕಲ್ ಸೆಕ್ಯೂರಿಟಿ ಸಂಸ್ಥೆಯ ರಮಿತ ಬಸು ಅವರು ಈಚೆಗೆ ಚಿತ್ರದುರ್ಗ ನಗರದ ಜಿಲ್ಲಾಪಂಚಾಯತ್‍ಗೆ ಭೇಟಿ ನೀಡಿ, ಸಂವಾದ ಕಾರ್ಯಕ್ರಮ ನಡೆಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ನೈಸರ್ಗಿಕ ಸಂಪನ್ಮೂಲಗಳ ಮೇಲ್ವಿಚಾರಣೆಗೆ ಸಂಬಂಧಿಸಿದ ಕಂದಾಯ, ಕೃಷಿ, ಅರಣ್ಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಯು ಸಕಾಲ ಜೀವರಾಶಿಗಳಿಗೆ ಹಾಗೂ ಪರಿಸರ ಸಮತೋಲನಕ್ಕೆ ತುಂಬಾ ಉಪಯುಕ್ತವಾದ್ದು, ಇವುಗಳ ಅಭಿವೃದ್ಧಿಗೆ ನರೇಗದಲ್ಲಿ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿ ಮತ್ತು ಮೇಲ್ವಿಚಾರಣೆಯಲ್ಲಿ ಸಂಬಂಧಿಸಿದ ಇಲಾಖೆಗಳ ಸಂಯೋಜನೆಯು ಬಹಳ ಮುಖ್ಯವಾಗಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ರಂಗಸ್ವಾಮಿಯವರು ಫೌಂಡೇಷನ್ ಫಾರ್ ಇಕೋಲಾಜಿಕಲ್ ಸೆಕ್ಯೂರಿಟಿ ಸಂಸ್ಥೆಯ ಕಳೆದ ನಾಲ್ಕು ವರ್ಷಗಳಿಂದ ನಮ್ಮ ಜಿಲ್ಲಾ ಪಂಚಾಯತ್‍ನೊಂದಿಗೆ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಗೆ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಇವರ ಸಂಸ್ಥೆಯ ಕ್ಲಾರ್ಟ್ (ಅಐಂಖಖಿ )ತಂತ್ರಾಂಶವು ನೀರನ್ನು ಇಂಗಿಸುವ ಮತ್ತು ನೀರನ್ನು ನಿಲ್ಲಿಸುವ ವಿವಿಧ ಕಾಮಗಾರಿಗಳಿಗೆ ಸೂಕ್ತ ಸ್ಥಳಾವಕಾಶ ಗುರುತಿಸುವುದಕ್ಕೆ ಸಹಕಾರಿಯಾಗಿರುತ್ತದೆ ಎಂದು ತಿಳಿಸಿದರು.
ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಮಾನತಾಡಿ, ನೈಸರ್ಗಿಕ ಸಂಪನ್ಮೂಲ ಅಬಿವೃದ್ಧಿ ಮತ್ತು ಮೇಲ್ವಿಚಾರಣೆಯಲ್ಲಿ ಗ್ರಾಮ ಪಂಚಾಯತಗಳ ಪಾತ್ರ ಪರಿಣಾಮಕಾರಿಯಾಗಿರಬೇಉ ಎಂದು ತಿಳಿಸಿದರು.
ಈ ಅಧ್ಯಯನ ತಂಡವು ಮಧ್ಯಾಹ್ನದ ಅವಧಿಯಲ್ಲಿ ಚಳ್ಳಕೆರೆ ತಾಲ್ಲೂಕು ಪಂಚಾಯತ್ ಸಬಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಶಶಿಧರ ಅವರ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಜೊತೆ ಅಧ್ಯಯನಕ್ಕೆ ಪೂರಕವಾದ ಸಂವಾದ ಕಾರ್ಯಕ್ರಮ ನಡೆಸಲಾಯಿತು ಹಾಗೂ ಎನ್.ಮಹದೇವಪುರ ಗ್ರಾಮ ಪಂಚಾಯಿತಿಯಲ್ಲಿನ ಸಿಬ್ಬಂದಿ ಮತ್ತು ಜನಪ್ರತಿನಿಧಿಗಳ ಜೊತೆ ಸಂವಾದ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ, ಫೌಂಡೇಷನ್ ಫಾರ್ ಇಕೋಲಾಜಿಕಲ್ ಸೆಕ್ಯೂರಿಟಿ ಸಂಸ್ಥೆಯ ಡಾ. ಸಯ್ಯಾದ್ ನೂರ್ ಪಾತಿಮಾ, ಕಾರ್ಯಕ್ರಮ ಅಧಿಕಾರಿ ತುಳಸಿದೇವಿ, ಜಿಲ್ಲಾ ಸಂಯೋಜಕ ಎಂ. ರಮೇಶ್ ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading