ವರದಿ: ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ: ತಾಲ್ಲೂಕಿನ ದೊಡ್ಡತೇಕಲವಟ್ಟಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಡೆದ ತಾಲ್ಲೂಕು ಮಟ್ಟದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದೆ.
ತಂಡದ ವಿದ್ಯಾರ್ಥಿಗಳಾದ ತೇಜಸ್, ಪಂಕಜ್, ಮಾರುತಿ ಮಧು, ದಕ್ಷತ್, ಸಂಜಯ್ ಹಾಗೂ ಲೋಕೇಶ್ ಮತ್ತು ಮನೋಜ್, ರವರು ಉತ್ತಮ ಆಟ ಪ್ರದರ್ಶಿಸಿ ನಿಜಲಿಂಗಪ್ಪ ಶಾಲೆಯ ಟೀಂ ವಿರುದ್ಧ ಜಯ ಸಾಧಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯ ಹಿಂದೆ ಶಾಲೆಯ ಶಿಕ್ಷಕರಾದ ಶ್ರೀನಿವಾಸ್ ಸಿದ್ದಪ್ಪ ಹಾಗೂ ಶ್ರೀಧರ್ ಉದಯಕುಮಾರ್, ಮುಖ್ಯ ಶಿಕ್ಷಕಿ ಶೋಭ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು.ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳ ಮಾರ್ಗದರ್ಶನ ಮತ್ತು ಪ್ರೋತ್ಸಾಹ ಪ್ರಮುಖವಾಗಿದ್ದು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ತಂಡದ ಒಗ್ಗಟ್ಟು ಹಾಗೂ ಕ್ರೀಡಾ ಮನೋಭಾವ ಬೆಳೆಸುವಲ್ಲಿ ಶಿಕ್ಷಕರು ಶ್ರಮಿಸಿದ್ದಾರೆ.
ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಮಕ್ಕಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
About The Author
Discover more from JANADHWANI NEWS
Subscribe to get the latest posts sent to your email.