ವರದಿ: ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ: ವೈಯಕ್ತಿಕ ಕಾರಣಗಳಿಂದ ರಜೆಯಲ್ಲಿದ್ದ ವೈದ್ಯ ಮಂಜುನಾಥ್ ಅವರ ಕ್ಲಿನಿಕ್ಗೆ ಕಂಚಿಪುರ ಗ್ರಾಮದ ರುದ್ರೇಶ್ ತೆರಳಿ ಗಲಾಟೆ ಮಾಡಿದ್ದಲ್ಲದೆ, ಅವರನ್ನು ಹಿಂಬಾಲಿಸಿ ನಿಂದಿಸಿ, ವಿಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಸಾರ್ವಜನಿಕವಾಗಿ ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ, ಸಂಬAಧಪಟ್ಟ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಉಪ್ಪಾರ ಸಮಾಜದ ಮುಖಂಡರು ಆಗ್ರಹಿಸಿದರು.
ತಾಲ್ಲೂಕು ಉಪ್ಪಾರ ಸಂಘ, ಉಪ್ಪಾರ ನೌಕರರ ಸಂಘದ ವತಿಯಿಂದ ಪಟ್ಟಣದ ಉಪ್ಪಾರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ತುರ್ತು ಸಭೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.
ವೈದ್ಯ ಮಂಜುನಾಥ್ ಮಾತನಾಡಿ, ತಾಲ್ಲೂಕಿನ ಮತ್ತೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ವೈಯಕ್ತಿಕ ಕಾರಣಗಳಿಂದ ಎರಡು ದಿನಗಳಿಂದ ರಜೆಯಲ್ಲಿದ್ದೆ. ಪಟ್ಟಣದ ಕ್ಲಿನಿಕ್ನಲ್ಲಿ ವೈಯಕ್ತಿಕ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭದಲ್ಲಿ ಗುರುವಾರ ಮಧ್ಯಾಹ್ನ ಅಲ್ಲಿಗೆ ಬಂದ ಕಂಚಿಪುರ ಗ್ರಾಮದ ರುದ್ರೇಶ್ ಎನ್ನುವ ವ್ಯಕ್ತಿ ಏಕಾಏಕಿ ಗಲಾಟೆ ಮಾಡಿ, ರೋಗಿಗಳ ಆರೈಕೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿದರು.
ತಾನು ರಜೆಯಲ್ಲಿರುವುದಾಗಿ ತಿಳಿಸಿದರೂ ರಜೆ ಪತ್ರ ನೀಡುವಂತೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದಾರೆ. ಕ್ಲಿನಿಕ್ನಲ್ಲಿದ್ದ ರೋಗಿಗಳ ಆರೈಕೆಗೆ ಅಡ್ಡಿಪಡಿಸಿದ್ದಾರೆ. ಬಳಿಕ ತಮ್ಮನ್ನು ಹಿಂಬಾಲಿಸಿಕೊAಡು ಬಂದು ವಾಹನ ತಡೆದು, ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ವಾಹನ ಚಲಾಯಿಸಲು ಬಿಡದೆ ಬೈಕ್ನ ಕೀಲಿಯನ್ನು ಕಸಿದುಕೊಂಡಿದ್ದಾರೆ. ಏಕವಚನದಲ್ಲಿ ಮಾತನಾಡಿ ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ದೂರಿದರು.
ಘಟನೆಯ ವಾಸ್ತವಾಂಶಗಳನ್ನು ಮರೆಮಾಚಿ ವಿಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ತಮ್ಮ ಮಾನಹಾನಿ ಮಾಡಲಾಗಿದೆ. ಉದ್ದೇಶಪೂರ್ವಕವಾಗಿ ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ ಅವರು, ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಗೆ ಹಾಗೂ ವೈದ್ಯಾಧಿಕಾರಿಗಳ ಸಂಘಕ್ಕೆ ದೂರು ಸಲ್ಲಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.
ಘಟನೆ ಕುರಿತು ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದರು. ತಾಲೂಕು ನೌಕರರ ಸಂಘ ಮತ್ತು ತಾಲೂಕು ವೈದ್ಯರ ಸಂಘ ಈ ಒಂದು ದುಶ್ಕೃತ್ಯವನ್ನ ಖಂಡಿಸಿದರು.
ಈ ವೇಳೆ ತಾಲ್ಲೂಕು ಉಪ್ಪಾರ ಸಮಾಜ ಹಾಗೂ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.