ಹಿರಿಯೂರು :
ದಾಸಶ್ರೇಷ್ಠರಲ್ಲಿ ಒಬ್ಬರಾದ ಕನಕದಾಸರ ಜಯಂತಿಯನ್ನು ಶಾಲೆಗಳಲ್ಲಿ ಆಚರಿಸುವ ಮೂಲಕ ಕನಕದಾಸರ ಜೀವನ ಹಾಗೂ ಸಾಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವ ಜೊತೆಗೆ ವಿದ್ಯಾರ್ಥಿಗಳು ಕನಕದಾಸರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾಡಬೇಕು ಎಂಬುದಾಗಿ ವಾಣಿವಿಲಾಸ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ ಹೇಳಿದರು.
ನಗರದ ವಾಣಿವಿಲಾಸ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಉಪನ್ಯಾಸಕಿ ಶ್ರೀಮತಿ ಗಂಗಮ್ಮ ಮಾತನಾಡಿ, ದಾಸಶ್ರೇಷ್ಠರಾದ ಕನಕದಾಸರು ಸರಳವಾದ ಭಾಷೆಯಲ್ಲಿ ಕೀರ್ತನೆಗಳನ್ನು ರಚಿಸುವ ಮೂಲಕ ಸಮಾಜದ ಅನಿಷ್ಠ ಪದ್ಧತಿಗಳನ್ನು ಹಾಗೂ ಮೂಢನಂಬಿಕೆಗಳನ್ನು ತಿದ್ದಲು ಪ್ರಯತ್ನಿಸಿದ ಮಹಾನ್ ಚೇತನ, ಇವರ ಕೀರ್ತನೆಗಳನ್ನು ನಾವು-ನೀವೆಲ್ಲರೂ ತಿಳಿದುಕೊಳ್ಳಬೇಕಿದೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಶ್ರೀಮತಿ ಸೌಮ್ಯ, ವ್ಯವಸ್ಥಾಪಕಿ ಶ್ರೀಮತಿ ವಸಂತಾ, ಕೋಆರ್ಡಿನೇಟರ್ ಗಳಾದ ಶ್ರೀಮತಿ ನಂದಿನಿ, ಶ್ರೀಮತಿ ರಚನ, ಶಿಕ್ಷಕ-ಶಿಕ್ಷಕಿಯರುಗಳಾದ ಶಿವರಾಜ್ ನಾಯಕ್, ಶ್ರೀಮತಿ ಗಂಗಮ್ಮ, ಶ್ರೀಮತಿ ರಜೀಯಾ, ಶ್ರೀಮತಿ ರಂಜಿತಾ, ಶ್ರೀಮತಿ ಮುಬೀನಾ, ಶ್ರೀಮತಿ ಸಬೀಹಾ, ಪೂಜಾ, ರಂಜಿತಾ, ಶ್ರೀಮತಿ ಸಾಧಿಕಾ, ಶ್ರೀಮತಿ ಅಕ್ಷಿತಾ, ಶ್ರೀಮತಿ ಜೈಸುಧಾ, ಶ್ರೀಮತಿ ಸುಲೋಚನಾ, ಕಾವ್ಯ, ಸುರೇಶ್, ಪ್ರಭಾಕರ್, ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಆರಂಭದಲ್ಲಿ ಶ್ರೀಮತಿ ಸಬೀಹಾ ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ವ್ಯವಸ್ಥಾಪಕಿ ಶ್ರೀಮತಿ ವಸಂತಾ ಪ್ರಾರ್ಥಿಸಿ, ಕೊನೆಯಲ್ಲಿ ವಂದಿಸಿದರು.

About The Author
Discover more from JANADHWANI NEWS
Subscribe to get the latest posts sent to your email.